ಮಾಜಿ ಸಂಸದ ಎಚ್.ಜಿ.ರಾಮುಲುರನ್ನು ಭೇಟಿ ಮಾಡಿದ ಕೊಪ್ಪಳ ಬಿಜೆಪಿ ಅಭ್ಯರ್ಥಿ

Spread the love

(ಪೊಲಿಟಿಕಲ್ ನ್ಯೂಸ್ : ಬಸವರಾಜ ಹಳ್ಳಿ)
ನಮ್ಮ ಸಿಂಧನೂರು, ಏಪ್ರಿಲ್ 1

ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗುವ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಮ್ಮದೇ ವೈಯಕ್ತಿಕ ವರ್ಚಸ್ಸು ಹೊಂದಿರುವ ಮಾಜಿ ಸಂಸದ ಎಚ್.ಜಿ.ರಾಮುಲು ಅವರನ್ನು ಕೊಪ್ಪಳ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ.ಎಸ್.ಕ್ಯಾವಟರ್, ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರು ಗಂಗಾವತಿಯ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ಕುರಿತು ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್‌ ಸಾಮಾಜಿಕ ಜಾಲತಾಣದಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Namma Sindhanuru Click For Breaking & Local News

ಕೊಪ್ಪಳ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಸಂಸದರ ನಿವಾಸಕ್ಕೆ ತೆರಳಿ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಕೆಲ ದಿನಗಳ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರೂ ಸಹ ಮಾಜಿ ಸಂಸದ ಎಚ್.ಜಿ.ರಾಮುಲು ಅವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿದ್ದರು. ಕೊಪ್ಪಳ ಕ್ಷೇತ್ರವನ್ನು ನಾಲ್ಕುಬಾರಿ ಪ್ರತಿನಿಧಿಸಿದ್ದ ಎಚ್.ಜಿ.ರಾಮುಲು ಅವರು ಇಂದಿರಾಗಾಂಧಿಯವರ ಅಪ್ಪಟ ಅಭಿಮಾನಿಯಾಗಿದ್ದು, ಕ್ಷೇತ್ರದಲ್ಲಿ ತಮ್ಮದೇ ಆದ ವರ್ಚಸ್ಸು ಹಾಗೂ ರಾಜಕೀಯ ಅನುಭವದ ಮೂಲಕ ಹಲವು ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ. ಅವರನ್ನು ಭೇಟಿ ಮಾಡಲು ಕಾಂಗ್ರೆಸ್ ಮುಖಂಡರು ಸೇರಿದಂತೆ ಬೇರೆ ಪಕ್ಷದವರು ಬರುವುದು ಸಾಮಾನ್ಯ ಎಂಬುದು ಅವರ ಅಭಿಮಾನಿಗಳು ಹಾಗೂ ಬೆಂಬಲಿಗರ ಅಭಿಪ್ರಾಯವಾಗಿದೆ.


Spread the love

Leave a Reply

Your email address will not be published. Required fields are marked *