ಶ್ರೀರಾಮನಗರ : ಶ್ರೀ.ಎ.ಕೆ.ಆರ್.ದೇವಿ ಮೆಮೋರಿಯಲ್ ಪಿಯು ಸೈನ್ಸ್ ಕಾಲೇಜ್‌ಗೆ ಶೇ.100ಕ್ಕೆ 100ರಷ್ಟು ಫಲಿತಾಂಶ

Spread the love

ನಮ್ಮ ಸಿಂಧನೂರು, ಏಪ್ರಿಲ್ 10
ಗಂಗಾವತಿ ತಾಲೂಕಿನ ಶ್ರೀರಾಮನಗರದ ಶ್ರೀಮತಿ ಎ.ಕೆ.ಆರ್.ದೇವಿ ಮೆಮೋರಿಯಲ್ ಸೈನ್ಸ್ ಕಾಲೇಜ್‌ನ ವಿದ್ಯಾರ್ಥಿಗಳು 2023-24ನೇ ಸಾಲಿನ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದು, ಕಾಲೇಜ್‌ಗೆ ಶೇ.100ಕ್ಕೆ 100ರಷ್ಟು ಫಲಿತಾಂಶ ದೊರೆತಿದೆ. 123 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದು, 60 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿನಿ ರೇಣುಕಾ 588 (98.00%), ಕೆ.ಪಲ್ಲವಿ 586 (97.67%), ಶಿವಸಾಗರ ಬಿ.ಮಾಲಿಪಾಟೀಲ್ 585 (97.50%), ಸಂಜನಾ ಕುಂಬಾರ 584 (97.33%), ಈಶ್ವರಿ 582 (97.00%) ಅಂಕಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಉಪನ್ಯಾಸಕರು, ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *