ನಮ್ಮ ಸಿಂಧನೂರು, ಎಪ್ರಿಲ್ 23
ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟç ಸಮಿತಿ ಪಕ್ಷದಿಂದ ಸ್ಪರ್ಧಿಸಿರುವ ಸಿಂಧನೂರು ತಾಲೂಕಿನ ಗೋಮರ್ಸಿ ಗ್ರಾಮದ ನಿರುಪಾದಿ ಗೋಮರ್ಸಿಯವರು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮತದಾರರನ್ನು ಭೇಟಿಯಾಗುವ ಮೂಲಕ ಮಂಗಳವಾರ ಮತಯಾಚನೆ ಮಾಡಿದರು. ಕಳೆದ ಎರಡ್ಮೂರು ವರ್ಷಗಳಿಂದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಯುವ ಉತ್ಸಾಹಿ ನಿರುಪಾದಿ ಗೋಮರ್ಸಿಯವರು ಕಳೆದ ಸಿಂಧನೂರು ವಿಧಾನಸಭಾ ಚುನಾವಣೆಯಲ್ಲೂ ಕೆಆರ್‌ಎಸ್ ಪಾರ್ಟಿಯಿಂದ ಸ್ಪರ್ಧಿಸಿದ್ದರು. ಈ ಬಾರಿಯೂ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿದ್ದಾರೆ. ಮತಯಾಚನೆಯ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.