ಸಿಂಧನೂರು: ನೇಹಾ ಹಿರೇಮಠ ಬರ್ಬರ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ

Spread the love

ನಮ್ಮ ಸಿಂಧನೂರು, ಎಪ್ರಿಲ್ 24
ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಬರ್ಬರ ಹತ್ಯೆ ಘಟನೆ ಖಂಡಿಸಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಅಖಿಲ ವಿದ್ಯಾರ್ಥಿ ಪರಿಷತ್‌ನಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮಂಗಳವಾರ ಸರ್ಕಾರಕ್ಕೆ ಮನವಿ ರವಾನಿಸಲಾಯಿತು. ಕಾಲೇಜು ಆವರಣದಲ್ಲಿ ಹಾಡ ಹಗಲೇ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಫಯಾಜ್ ಎನ್ನುವಾತ ಕೊಲೆ ಮಾಡಿರುವುದರಿಂದ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿದೆ. ಕೊಲೆಗಾರ ಕಾಲೇಜಿನ ಒಳಗಡೆ ಬಂದು ರಾಜಾರೋಷವಾಗಿ ಇಂತಹ ಕೃತ್ಯ ಎಸಗಿರುವುದು ಗಮನಿಸಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿರುವುದಕ್ಕೆ ಸಾಕ್ಷಿಯಾಗಿದೆ. ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತಗೊಂಡಿದೆ. ಪೊಲೀಸರು ಈ ದುಷ್ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ ಅಪರಾಧಿಗೆ ಕಠಿಣ ಶಿಕ್ಷೆ ಆಗುವ ಹಾಗೆ ನೋಡಿಕೊಳ್ಳಬೇಕು ಆ ಮೂಲಕ ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.

Namma Sindhanuru Click For Breaking & Local News

ರಾಜ್ಯದ ಶಾಲಾ-ಕಾಲೇಜು ಪ್ರದೇಶಗಳಲ್ಲಿ ಪೊಲೀಸರು ಮಫ್ತಿಯಲ್ಲಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಬೇಕು, ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಸುರಕ್ಷತೆ ಒದಗಿಸಬೇಕು, ಹದಗೆಡುತ್ತಿರುವ ಕಾನೂನು ವ್ಯವಸ್ಥೆಯನ್ನು ಸುವ್ಯವಸ್ಥೆಗೆ ತರಬೇಕು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸಂಭಾವ್ಯ ದುಷ್ಕೃತ್ಯಗಳನ್ನು ತಡೆಯಬೇಕು ಹಾಗೂ ನೇಹಾ ಹಿರೇಮಠ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಸರ್ಕಾರಕ್ಕೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿ ನಾಗರಾಜ್ ಬೆಟಗೇರಿ, ಸುರೇಶ್ ಬಡಿಗೇರ, ನಗರ ಸಂಚಾಲಕ ಪ್ರದೀಪ್ ಪಾಟೀಲ್, ತಾಲೂಕು ಸಂಚಾಲಕರಾದ ಅಭಿಷೇಕ್ ಮೇಟಿ, ರಾಮನಗೌಡ, ವಿನಯ, ಸಂದೀಪ ನಾಯಕ, ಮೌನೇಶ್ ವಿಶ್ವಕರ್ಮ, ಸುಬ್ರಹ್ಮಣ್ಯ, ಶಶಿಧರ್, ರವಿಕುಮಾರ ಇನ್ನಿತರರಿದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *