ಮಸ್ಕಿ: ಬಿಜೆಪಿಯ ಹಿರಿಯ ಮುಖಂಡ ಅಂದಾನಪ್ಪ ಗುಂಡಳ್ಳಿ ಕಾಂಗ್ರೆಸ್‌ಗೆ

Spread the love

ನಮ್ಮ ಸಿಂಧನೂರು, ಎಪ್ರಿಲ್ 23
ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಬಿಜೆಪಿಯ ಹಿರಿಯ ಮುಖಂಡ ಹಾಗೂ ಉದ್ಯಮಿ ಅಂದಾನಪ್ಪ ಗುಂಡಳ್ಳಿ ಅವರು ಮಂಗಳವಾರ ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಲ್ಲಿ ರಾಜ್ಯ ಮತ್ತು ಜಿಲ್ಲಾಮಟ್ಟದ ಕಾಂಗ್ರೆಸ್‌ನಲ್ಲಿ ಪ್ರಮುಖ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರು, ರಾಜಕೀಯ ಬದಲಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಪಸ್ತುತ ಲೋಕಸಭಾ ಚುನಾವಣೆಯ ಹೊತ್ತಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಮಸ್ಕಿ ವಿಧಾನಸಭಾ ಕ್ಷೇತ್ರದ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಮಾಜಿ ಸಂಸದ ಸಂಗಣ್ಣ ಕರಡಗಿ, ಶಾಸಕರಾದ ಹಂಪನಗೌಡ ಬಾದರ್ಲಿ, ಆರ್‌.ಬಸನಗೌಡ ತುರ್ವಿಹಾಳ, ಅಭ್ಯರ್ಥಿ ರಾಜಶೇಖರ ಹಿಟ್ನಾಳ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ ಹಲವು ಮುಖಂಡರು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *