ಸಿಂಧನೂರು : ಗ್ರಾಮೀಣ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸಿ.ಎಚ್.ಲಲಿತಾ ನೇಮಕ

Spread the love

ನಮ್ಮ ಸಿಂಧನೂರು, ಎಪ್ರಿಲ್ 26
ತಾಲೂಕು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಸಿ.ಎಚ್.ಲಲಿತಾ ಗಾಂಧಿನಗರ ಹಾಗೂ ಎಸ್ಟಿ ವಿಭಾಗದ ಮಹಿಳಾ ನಗರ ಘಟಕದ ಅಧ್ಯಕ್ಷೆಯನ್ನಾಗಿ ಬಸಮ್ಮ ಶಿವಲಿಂಗಪ್ಪ ಅವರನ್ನು ನೇಮಕ ಮಾಡಲಾಗಿದೆ. ಶಾಸಕ ಹಂಪನಗೌಡ ಬಾದರ್ಲಿ ಅವರ ಶಿಫಾರಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷೆ ನಾಗವೇಣಿ ಪಾಟೀಲ್ ಅವರು ನೇಮಕ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಶಾಸಕ ಹಂಪನಗೌಡ ಬಾದರ್ಲಿ ಅವರು ನೇಮಕದ ಆದೇಶ ಪತ್ರಗಳನ್ನು ನೂತನ ಅಧ್ಯಕ್ಷರಿಗೆ ನೀಡಿದರು. ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಶರಣೇಗೌಡ, ಕಾಂಗ್ರೆಸ್ ಮುಖಂಡರಾದ ವಿಶ್ವನಾಥ ಪಾಟೀಲ್, ವೀರೇಶ ಶಿಳ್ಳಿ, ಸಂಗೀತಾ ಸಾರಂಗಮಠ ಇನ್ನಿತರರಿದ್ದರು.


Spread the love

Leave a Reply

Your email address will not be published. Required fields are marked *