ನಮ್ಮ ಸಿಂಧನೂರು, ಮೇ 2
ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ರಾಯಚೂರು ನಗರಕ್ಕೆ ಆಗಮಿಸಲಿದ್ದು, ಕೈ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ರಾಯಚೂರಿನ ಬಸವೇಶ್ವರ ವೃತ್ತದಲ್ಲಿರುವ ವಲ್ಕಟ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆ ಸುಮಾರು ಬೃಹತ್ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿದ್ದು, ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿ ಬಿಜೆಪಿ ಅಭ್ಯರ್ಥಿಗಳು ವಿಜಯ ಶಾಲಿಯಾಗಿದ್ದು, ಈ ಬಾರಿ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯಕ ಅವರು ಕೈ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಕ್ಷೇತ್ರವನ್ನು ತನ್ನ ಹತೋಟಿಗೆ ತೆಗೆದುಕೊಳ್ಳಲು ಕಾಂಗ್ರೆಸ್ ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ಹೇಳಲಾಗುತ್ತಿದೆ. ಈ ಸಮಾವೇಶದಲ್ಲಿ ರಾಯಚೂರು, ಯಾದಗಿರಿ ವ್ಯಾಪ್ತಿಯ ಸಾವಿರಾರು ಜನರು ಸೇರುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.