ನಮ್ಮ ಸಿಂಧನೂರು, ಜೂನ್ 3
ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಕೆಒಎಫ್ ಅಧ್ಯಕ್ಷ ವೆಂಕಟರಾವ್ ನಾಡಗೌಡ ಅವರು ಸೋಮವಾರ ಕುಷ್ಟಗಿ ಮಾರ್ಗದ ರಸ್ತೆಯಲ್ಲಿರುವ ಕುಡಿವ ನೀರಿನ ಕೆರೆಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಚಂದ್ರು ಮೈಲಾರ, ವೀರಭದ್ರಪ್ಪ, ಸುಮಿತ್ ತಡಕಲ್ ಸೇರಿದಂತೆ, ಜೆಡಿಎಸ್ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.