ಬೆಂಗಳೂರಿನ ಕಾವೇರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಮುತ್ತು ಪಾಟೀಲ್

Spread the love

ನಮ್ಮ ಸಿಂಧನೂರು, ಜೂನ್ 8
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಾವೇರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತಮ್ಮ ಜನ್ಮ ದಿನದ ಪ್ರಯುಕ್ತ ಜೂನ್ 10ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಜನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಸೇವಕ ಮುತ್ತು ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಶನಿವಾರ ಹೇಳಿಕೆ ನೀಡಿರುವ ಅವರು, ವಿಶೇಷವಾಗಿ ಕೊಪ್ಪಳ, ರಾಯಚೂರು, ಬಾಗಲಕೋಟ, ಬಳ್ಳಾರಿ, ಯಾದಗಿರಿ, ಹೊಸಪೇಟೆ ಮತ್ತು ಗದಗ ಜಿಲ್ಲೆಯ ಭಾಗದ ಜನರು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಚಿಕಿತ್ಸೆ ಪಡೆಯಬಹುದಾಗಿದೆ. ಈ ಭಾಗದ ಬಡ ಮತ್ತು ಮಧ್ಯಮ ವರ್ಗದ ಜನರ ಆರೋಗ್ಯದ ಹಿತದೃಷ್ಟಿಯಿಂದ ಶಿಬಿರವನ್ನು ಆಯೋಜಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ: 9964385999 ಸಂಪರ್ಕಿಸಬಹುದಾಗಿದೆ.


Spread the love

Leave a Reply

Your email address will not be published. Required fields are marked *