ಸಿಂಧನೂರು: ತುಂಗಭದ್ರಾ ಡ್ಯಾಂ ಒಳಹರಿವು 25,556 ಕ್ಯೂಸೆಕ್‌ಗೆ ಏರಿಕೆ

Spread the love

ನಮ್ಮ ಸಿಂಧನೂರು, ಜುಲೈ 6
ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 06-07-2024 ಶನಿವಾರದಂದು 25,556 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 13.90 ಟಿಎಂಸಿ ನೀರು ಸಂಗ್ರಹವಿದ್ದರೆ, 190 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ 3.08 ಟಿಎಂಸಿ ನೀರು ಸಂಗ್ರಹವಿದ್ದರೆ, 193 ಕ್ಯೂಸೆಕ್ ನೀರು ಒಳಹರಿವಿತ್ತು, 77 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. ಈಗಾಗಲೇ ತುಂಗಾ ನದಿ ತುಂಬಿದ್ದು, 21 ಗೇಟ್‌ಗಳ ಮೂಲಕ ನದಿಗೆ ನೀರು ಹರಿಬಿಡಲಾಗಿದೆ. ಅಲ್ಲದೇ ಶಿವಮೊಗ್ಗದ ಮಲೆನಾಡ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ನದಿಯ ಒಳಹರಿವು ಹೆಚ್ಚಿದೆ. ಪ್ರಸಕ್ತ ಮಳೆ ವರ್ಷದಲ್ಲಿ ಅತಿ ಹೆಚ್ಚಿನ ಒಳಹರಿವು ಇಂದು ದಾಖಲಾಗಿದೆ. ಮಳೆಯ ಪ್ರಮಾಣ ಹೆಚ್ಚಿದಂತೆ ಒಳಹರಿವು ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.


Spread the love
ಟ್ಯಾಗ್‌ಗಳು:

Leave a Reply

Your email address will not be published. Required fields are marked *