ಸಿಂಧನೂರು: ಕೇಂದ್ರೀಯ ವಿದ್ಯಾಲಯದಲ್ಲಿ ಪ್ರಸಕ್ತ ವರ್ಷದಿಂದ ವಿದ್ಯಾರ್ಥಿಗಳ ಪ್ರವೇಶಕ್ಕೆ ಡಾ.ಕ್ಯಾವಟರ್ ಮನವಿ

Spread the love

ನಮ್ಮ ಸಿಂಧನೂರು, ಜುಲೈ 10
ಸಿಂಧನೂರಿಗೆ ಕೇಂದ್ರೀಯ ವಿದ್ಯಾಲಯ ಮಂಜೂರಾಗಿದ್ದರೂ ಸರ್ಕಾರ ವಿದ್ಯಾರ್ಥಿಗಳ ಪ್ರವೇಶಕ್ಕೆ ಇನ್ನುವರೆಗೂ ಅನುಮತಿ ನೀಡಿಲ್ಲ. ಹಾಗಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೊಪ್ಪಳ ಲೋಕಸಭೆಗೆ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತಗೊಂಡಿದ್ದ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರು ಹೊಸದಿಲ್ಲಿಯಲ್ಲಿ ಕೇಂದ್ರೀಯ ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ನನ್ನ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದು, ಶಿಕ್ಷಣ ಸಚಿವರ ಜೊತೆಗೆ ಮಾತನಾಡಿ ಇದೇ ವರ್ಷದಿಂದ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ಕೊಡಿಸುವ ಭರವಸೆ ನೀಡಿದ್ದಾರೆ” ಎಂದು ಅವರು ತಿಳಿಸಿದ್ದಾರೆ.


Spread the love

Leave a Reply

Your email address will not be published. Required fields are marked *