ನಮ್ಮ ಸಿಂಧನೂರು, ಆಗಸ್ಟ್ 25
ಅಹಿಂದ ವರ್ಗಗಳ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕೇಂದ್ರ ಸರ್ಕಾರದ ಅಣತಿಯಂತೆ ಸಂವಿಧಾನ ಬಾಹಿರವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆಂದು ಆರೋಪಿಸಿ, ತಾಲೂಕು ಅಹಿಂದ ಒಕ್ಕೂಟ, ಪ್ರಗತಿಪರ ಸಂಘಟನೆಗಳ ಒಕ್ಕೂಟ ಮತ್ತು ಸಿದ್ದರಾಮಯ್ಯನವರ ಅಭಿಮಾನಿ ಬಳಗದ ವತಿಯಿಂದ ಮಸ್ಕಿ ಪಟ್ಟಣದಲ್ಲಿ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ಪ್ರತಿಮೆವರೆಗೆ ಭಾನುವಾರ ಬೆಳಿಗ್ಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
2023ರ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಕಾಂಗ್ರೆಸ್ ಪಕ್ಷ ಚುನಾವಣೆಯ ಸಂದರ್ಭದಲ್ಲಿ ಜನರಿಗೆ ನೀಡಿದ ಐದು ಗ್ಯಾರಂಟಿ ಭರವಸೆಗಳಂತೆ ಅನ್ನಭಾಗ್ಯ, ಗೃಹಲಕ್ಷಿö್ಮ, ಶಕ್ತಿಯೋಜನೆ, ಗೃಹಜ್ಯೋತಿ ಹಾಗೂ ಯುವನಿಧಿ ಯಂತಹ ೫ ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನಾಡಿನ ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ಜನ ಸಮುದಾಯಗಳ ಬಡವರ ಜನಮೆಚ್ಚುಗೆ ಗಳಿಸಿದೆ. ಇದನ್ನು ಸಹಿಸಿಕೊಳ್ಳಲಾಗದ ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಎನ್‌ಡಿಎ ಪಾಲುದಾರ ಪಕ್ಷವಾದ ಜೆಡಿಎಸ್‌ನ ನಾಯಕರು, ದುರುದ್ದೇಶದಿಂದ ಮಾನ್ಯ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣವನ್ನು ನೆಪಮಾಡಿಕೊಂಡು ಸ್ಪಷ್ಟ ಜನಾದೇಶವನ್ನು ಪಡೆದಿರುವ ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಹೊರಟಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಆರ್.ಬಸನಗೌಡ ತುರ್ವಿಹಾಳ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನಗೌಡ ಪಾಟೀಲ್ ಮಾತನಾಡಿ ರಾಜ್ಯಪಾಲರ ನಡೆಯನ್ನು ಖಂಡಿಸಿದರು. ಮುಖಂಡರಾದ ಅಂದಾನಪ್ಪ ಗುಂಡಳ್ಳಿ, ಹನುಮಂತಪ್ಪ ಮುದ್ದಾಪುರ, ವೆಂಕಟರೆಡ್ಡಿ ಹಾಲಾಪುರ, ಮಹಿಳಾ ಕಾಂಗ್ರೆಸ್‌ನ ಡಿ.ನಾಗವೇಣಿ ಪಾಟೀಲ್, ಸಿದ್ದನಗೌಡ ಮಾಟೂರು, ನಿರುಪಾದಪ್ಪ ವಕೀಲರು, ಮಸ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಸನಗೌಡ ಮುದವಾಳ, ಅಶೋಕ ಉಮಲೂಟಿ, ಎಂ.ಅಮರೇಶ, ಪಂಪನಗೌಡ ಗುಡದೂರು, ಕೃಷ್ಣಾ ಡಿ.ಚಿಗರಿ, ಮಹಾಂತೇಶ ಜಾಲವಾಡಗಿ, ಬಸಪ್ಪ ಬ್ಯಾಳಿ, ಬಸನಗೌಡ ಸಜ್ಜನ, ಶ್ರೀಶೈಲಪ್ಪ, ಮಲ್ಲಯ್ಯ ಬಳ್ಳಾ, ಶಿವಣ್ಣ ನಾಯಕ್, ಕರಿಯಪ್ಪ ಹಾಲಾಪುರ, ವೀರೇಶ ಆನೆಹೂಸೂರು, ಅಹಿಂದ ಒಕ್ಕೂಟ, ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.