ಸಿಂಧನೂರು: ಹಳ್ಳದಲ್ಲಿ ಮೊಸಳೆ ಮತ್ತೆ ಪ್ರತ್ಯಕ್ಷ

Spread the love

ನಮ್ಮ ಸಿಂಧನೂರು, ಸೆಪ್ಟೆಂಬರ್ 11
ನಗರದ ಸುಕಾಲಪೇಟೆ ಪಕ್ಕದಲ್ಲಿರುವ ಹಳ್ಳದಲ್ಲಿ ಬುಧವಾರ ಮತ್ತೆ ಮೊಸಳೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಯಾರೂ ಇಲ್ಲದೇ ಇರುವ ಸಂದರ್ಭದಲ್ಲಿ ಮೊಸಳೆ ಹಳ್ಳದಿಂದ ದಂಡೆಗೆ ಬರುತ್ತಿರುವುದನ್ನು ಪ್ರತ್ಯಕ್ಷದರ್ಶಿಗಳು ಮೊಬೈಲ್‌ನಲ್ಲಿ ಫೋಟೋ ತೆಗೆದಿದ್ದಾರೆ. ಭಾನುವಾರ ಮೊಸಳೆ ಕುರಿಯೊಂದನ್ನು ಬಲಿ ಪಡೆದಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಹಿನ್ನೆಲೆಯಲ್ಲಿ ಮೊಸಳೆ ಪ್ರತ್ಯಕ್ಷವಾದ ಪ್ರದೇಶದಲ್ಲಿ ಬ್ಯಾನರ್ ಅಳವಡಿಸಿ, ಮೊಸಳೆ ಇರುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದನ್ನು ಸ್ಮರಿಸಬಹುದಾಗಿದೆ. ಯಾರೂ ಇಲ್ಲದೇ ಇರುವ ಸಂದರ್ಭದಲ್ಲಿ ಮೊಸಳೆ ದಂಡೆಗೆ ಬರುತ್ತಿದ್ದು,


Spread the love

Leave a Reply

Your email address will not be published. Required fields are marked *