ನಮ್ಮ ಸಿಂಧನೂರು, ಸೆಪ್ಟೆಂಬರ್ 21
ತುಂಗಭದ್ರಾ ಜಲಾಶಯಕ್ಕೆ ದಿನಾಂಕ:21-09-2024 ಶನಿವಾರದಂದು 10,742 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 10,142 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ ಸದ್ಯ 101.77 ಟಿಎಂಸಿ ನೀರು ಸಂಗ್ರಹವಿದ್ದು, ಒಳಹರಿವಿನ ಪ್ರಮಾಣದಲ್ಲಿ ಕಳೆದ ಹಲವು ದಿನಗಳಿಂದ ಸ್ಥಿರತೆಯಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 62.54 ಟಿಎಂಸಿ ನೀರು ಸಂಗ್ರಹವಿತ್ತು. 6,065 ಕ್ಯೂಸೆಕ್ ನೀರು ಒಳಹರಿವಿತ್ತು, 9,964 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. ಕಳೆದ 10 ರ‍್ಷಗಳ ಹಿಂದೆ ಇದೇ ದಿನ ಜಲಾಶಯದಲ್ಲಿ 84.63 ಟಿಎಂಸಿ ನೀರು ಸಂಗ್ರಹವಿತ್ತು. 10,802 ಕ್ಯೂಸೆಕ್ ನೀರು ಒಳಹರಿವಿತ್ತು, 15,961 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. ಕಳೆದ ಆಗಸ್ಟ್ 10 ಶನಿವಾರದಂದು ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್‌ಗೇಟ್ ಕೊಚ್ಚಿಹೋದ ಪರಿಣಾಮ, ಸ್ಟಾಪ್‌ಲಾಗ್ ಗೇಟ್ ಅಳವಡಿಸುವ ಸಂಬಂಧ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗಿತ್ತು. ನದಿಗೆ ನೀರು ಹರಿಬಿಟ್ಟರೂ ಪುನಃ ಮತ್ತೊಮ್ಮೆ ಡ್ಯಾಂ ರ‍್ತಿಯಾಗಿದೆ. ನದಿಮೂಲ ಮತ್ತು ಮಲೆನಾಡ ಭಾಗದಲ್ಲಿ ಮಳೆ ಕ್ಷೀಣಿಸಿದ್ದು, ಕಳೆದ ಕೆಲವು ದಿನಗಳಿಂದ ದಿನ ಕನಿಷ್ಠ 10 ಸಾವಿರ ಕ್ಯೂಸೆಕ್‌ಗೂ ನೀರು ಡ್ಯಾಮಿಗೆ ಹರಿದು ಬರುತ್ತಿದ್ದು, ಡ್ಯಾಂ ನೀರಿನ ಸಂಗ್ರಹದಲ್ಲಿ ಸ್ಥಿರತೆ ಕಾಯ್ದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.