ಸಿಂಧನೂರು: ಪೂರ್ಣ ಫಲಿತಾಂಶ ಬಂದ ನಂತರ ಪ್ರತಿಕ್ರಿಯಿಸುವೆ: ಡಿ.ಕೆ.ಶಿವಕುಮಾರ್

Spread the love

ನಮ್ಮ ಸಿಂಧನೂರು, ಅಕ್ಟೋಬರ್ 08
ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ರಾಜ್ಯದ ವಿಧಾನಸಭೆ ಚುನಾವಣೆ ಸಂಬಂಧಿಸಿದಂತೆ, ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮಂಗಳವಾರ ಹೀಗೆ ಪ್ರತಿಕ್ರಿಯಿಸಿದ್ದಾರೆ. “ಇನ್ನು ಪೂರ್ಣ ಪ್ರಮಾಣದ ಫಲಿತಾಂಶ ಬಂದಿಲ್ಲ. ಆರಂಭದ ವರದಿಗಳ ಪ್ರಕಾರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಮುಂದಿತ್ತು, ತದನಂತರ ಫಲಿತಾಂಶದಲ್ಲಿ ಬಹಳಷ್ಟು ಏರುಪೇರಾಗುತ್ತಿದೆ. ಪೂರ್ಣ ಫಲಿತಾಂಶ ಬಂದ ನಂತರ ಪ್ರತಿಕ್ರಿಯಿಸುವೆ” ಎಂದು ಪ್ರತಿಕ್ರಿಯಿಸಿದ್ದಾರೆ. ಸಿಂಧನೂರು ದಸರಾ ಮಹೋತ್ಸವದ ನಿಮಿತ್ತ ನಗರದ ಎಪಿಎಂಸಿ ಪ್ರಾಂಗಣದಲ್ಲಿ ಹಮ್ಮಿಕೊಂಡಿರುವ ರೈತ ದಸರಾ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಸಚಿವ ಶಿವರಾಜ ತಂಗಡಗಿ, ಶಾಸಕ ಹಂಪನಗೌಡ ಬಾದರ್ಲಿ, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಸೇರಿದಂತೆ ಹಲವು ಮುಖಂಡರು ಇದ್ದರು.


Spread the love

Leave a Reply

Your email address will not be published. Required fields are marked *