ಸಿಂಧನೂರು: ತುಂಗಭದ್ರಾ ಜಲಾಶಯಕ್ಕೆ 24,465 ಕ್ಯೂಸೆಕ್ ಒಳಹರಿವು

Spread the love

ನಮ್ಮ ಸಿಂಧನೂರು, ಅಕ್ಟೋಬರ್ 16
ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಕೊಂಚ ಕುಸಿತವಾಗಿದೆ. ದಿನಾಂಕ:16-10-2024 ಬುಧವಾರದಂದು 24,465 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 25,189 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ ಸದ್ಯ 101.50 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 45.56 ಟಿಎಂಸಿ ನೀರು ಸಂಗ್ರಹವಿತ್ತು. 749 ಕ್ಯೂಸೆಕ್ ನೀರು ಒಳಹರಿವಿತ್ತು, 9,358 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. ನದಿಮೂಲ ಮತ್ತು ಮಲೆನಾಡ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಒಳಹರಿವಿನ ಪ್ರಮಾಣ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.


Spread the love
ಟ್ಯಾಗ್‌ಗಳು:

Leave a Reply

Your email address will not be published. Required fields are marked *