ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಅಕ್ಟೋಬರ್ 25
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸಂಚಾರ ನಿಯಮಗಳ ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 1ರಿಂದ ದ್ವಿಚಕ್ರವಾಹನ ಸವಾರ ಹಾಗೂ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಸಿಂಧನೂರು ನಗರ ಸಂಚಾರ ಪೊಲೀಸ್ ಠಾಣೆಯಿಂದ ಈಗಾಗಲೇ ಜಾಗೃತಿ ಆರಂಭಿಸಲಾಗಿದ್ದು, ನಗರದ ಗಾಂಧಿ ಸರ್ಕಲ್ನಲ್ಲಿ ಬ್ಯಾನರ್ ಹಾಕಲಾಗಿದೆ. ಜಿಲ್ಲೆಯಲ್ಲಿ ಕಳೆದ ಮೂರುವರೆ ವರ್ಷದಲ್ಲಿ ಹಲವು ಅಪಘಾತ ಪ್ರಕರಣಗಳಲ್ಲಿ 1184 ಜನರು ಪ್ರಾಣ ಕಳೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಆಯುಷ್ ಆಸ್ಪತ್ರೆಯ ವೈದ್ಯ ಡಾ.ಅಮರ್ ಪಾಟೀಲ್ ಅವರು ಸಹ ಗಾಂಧಿಸರ್ಕಲ್ ಹಾಗೂ ಕನಕದಾಸ ಸರ್ಕಲ್ನಲ್ಲಿ ಜಾಗೃತಿ ಅಭಿಯಾನದ ಬ್ಯಾನರ್ ಹಾಕಿಸಿದ್ದಾರೆ.