ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ನವೆಂಬರ್ 22
ನಗರದ ಪ್ರಮುಖ ರಸ್ತೆ ಮಾರ್ಗಗಳಲ್ಲಿ ಕಳೆದ ಹಲವು ದಿನಗಳಿಂದ ಅನ್ನಾಹಾರಕ್ಕಾಗಿ ಅಲೆದಾಡುತ್ತಿದ್ದ ಬುದ್ಧಿಮಾಂದ್ಯ ಮಹಿಳೆಗೆ ಕಾರುಣಾಶ್ರಮದಲ್ಲಿ ತಾತ್ಕಾಲಿಕ ನೆಲೆ ಕಲ್ಪಿಸಿ ಮಾನವೀಯತೆ ತೋರಿದ ಘಟನೆ ಶುಕ್ರವಾರ ನಡೆದಿದೆ. ಬಸ್ ನಿಲ್ದಾಣದ ಬಳಿ ರಸ್ತೆ ಮಧ್ಯದ ಡಿವೈಡರ್ ಪಕ್ಕ ಕುಳಿತಿದ್ದ ಬುದ್ಧಿಮಾಂದ್ಯ ಮಹಿಳೆಯನ್ನು ಗಮನಿಸಿದ ನಮ್ಮ ಕರ್ನಾಟಕ ಸೇನೆಯ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ, ಇಂದಿರಾ ಸ್ತಿçÃಶಕ್ತಿ ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ ಅವರು ನಮ್ಮ ಅಕ್ಷಯ ಆಹಾರ ಜೋಳಿಗೆ ಸೇವಾ ಟ್ರಸ್ಟ್ ಹಾಗೂ ಕಾರುಣ್ಯ ನೆಲೆ ವೃದ್ಧಾಶ್ರಮದವರ ಗಮನಕ್ಕೆ ತಂದಿದ್ದಾರೆ. ನಂತರ ವೃದ್ಧಾಶ್ರಮದವರು ಬುದ್ಧಿಮಾಂಧ್ಯ ಮಹಿಳೆ ಇರುವಲ್ಲಿಗೆ ಬಂದು ಕ್ಷೌರ ಮಾಡಿಸಿ, ಶುಭ್ರ ಬಟ್ಟೆ ಕೊಟ್ಟು ಆಶ್ರಮದಲ್ಲಿ ತಾತ್ಕಾಲಿಕ ನೆಲೆ ಕಲ್ಪಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಾನಸಿಕ ರೋಗಿಗಳ ಆಸ್ಪತ್ರೆ ನಿಮಾನ್ಸ್ಗೆ ಮಹಿಳೆಯನ್ನು ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅಕ್ಷಯ ಆಹಾರ ಜೋಳಿಗೆ ಸೇವಾ ಟ್ರಸ್ಟ್ ಕಾರ್ಯದರ್ಶಿ ಅಶೋಕ್ ನಲ್ಲ, ಕಾರುಣ್ಯ ನೆಲೆ ವೃದ್ದಾಶ್ರಮ ಮತ್ತು ವಯಸ್ಕರ ಬುದ್ದಿಮಾಂದ್ಯ ಆಶ್ರಮ ಕಾರ್ಯಾಧ್ಯಕ್ಷ ಡಾ.ಚನ್ನಬಸವಸ್ವಾಮಿ ಹಿರೇಮಠ, ಗೌರಮ್ಮ, ಸಿಡಿಪಿಒ ಇಲಾಖೆ ಮೇಲ್ವಿಚಾರಕಿ ಅಮರಮ್ಮ ಸೇರಿದಂತೆ ಇನ್ನಿತರರು ಇದ್ದರು.