ಸಿಂಧನೂರು: ಕರ್ತವ್ಯಲೋಪ ಎಸಗಿದ ವೈದ್ಯರ ಅಮಾನತು, ಮೃತ ಬಾಣಂತಿಯರಿಗೆ ಪರಿಹಾರಕ್ಕೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಉಪವಾಸ ಸತ್ಯಾಗ್ರಹ

Spread the love

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಡಿಸೆಂಬರ್ 03

ಸಿಂಧನೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾದ ನಂತರ ಮೌಸಂಬಿ ಮಂಡಲ್, ಚಂದ್ರಕಲಾ ಹಾಗೂ ರೇಣುಕಮ್ಮ ಎಂಬ ಮೂವರು ಮಹಿಳೆಯರು ಅಸ್ವಸ್ಥಗೊಂಡು ರಿಮ್ಸ್ನಲ್ಲಿ ಮೃತಪಟ್ಟಿದ್ದು, ಸರಣಿ ಸಾವಿನ ಪ್ರಕರಣಗಳ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು, ವೈದ್ಯಕೀಯ ನಿರ್ಲಕ್ಷö್ಯ ವಹಿಸಿದ ವೈದ್ಯರು, ಸಿಬ್ಬಂದಿಯನ್ನು ಅಮಾನತುಮಾಡಬೇಕು ಹಾಗೂ ಸಂತ್ರಸ್ತ ಕುಟುಂಬದವರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ತಾಲೂಕು ಘಟಕದಿಂದ ಮಂಗಳವಾರ ಉಪವಾಸ ಸತ್ಯಾಗ್ರಹ ಆರಂಭಿಸಲಾಯಿತು.
ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ ಮಾತನಾಡಿ, ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಖಂಡಿಸಿ ದಿನಾಂಕ: 07-09-2024ರಂದು ಲಿಂಗಸುಗೂರು ಸಹಾಯಕ ಆಯಕ್ತರು, ರಾಯಚೂರು ಜಿಲ್ಲಾ ಡಿಎಚ್‌ಒ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಸಿಂಧನೂರು ದಸರಾ ಉತ್ಸವ ಚಾಲನೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೂ ದಿನಾಂಕ: 04-10-2024 ರಂದು ಮನವಿಪತ್ರ ನೀಡಿ ಒತ್ತಾಯಿಸಲಾಗಿತ್ತು. ಅಲ್ಲದೇ ತಾಲೂಕಿನ ಆರ್.ಎಚ್.ಕ್ಯಾಂಪ್-3ರ ಮಹಿಳೆಯೊಬ್ಬರು ಮೃತಪಟ್ಟ ಸಂದರ್ಭದಲ್ಲಿ ದಿನಾಂಕ: 22-10-2024 ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗೆ ಮನವಿ ಸಲ್ಲಿಸಿ ಕೂಡಲೇ ಕ್ರಮಕ್ಕೆ ಆಗ್ರಹಿಸಲಾಗಿತ್ತು. ದಿನಾಂಕ: 08-11-2024ರಂದು ತಹಸಿಲ್ ಕಾರ್ಯಾಲಯದ ಮುಂದೆ 4 ದಿನಗಳ ಕಾಲ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಿದರೂ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳಾಗಲಿ, ತಾಲೂಕು, ಜಿಲ್ಲಾಡಳಿತದ ಅಧಿಕಾರಿಗಳಾಗಲೀ ಕ್ರಮಕ್ಕೆ ಮುಂದಾಗದೇ ನಿರ್ಲಕ್ಷö್ಯವಹಿಸಿದ್ದರಿಂದ ಬೇಸತ್ತು ಸಂತ್ರಸ್ತ ಕುಟುಂಬದವರೊAದಿಗೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Namma Sindhanuru Click For Breaking & Local News

ರಾಜ್ಯ ಘಟಕದ ಕಾರ್ಯಾಧ್ಯಕ್ಷ ಉಮೇಶಗೌಡ ಅರಳಹಳ್ಳಿ ಮಾತನಾಡಿ, ಈಗಾಗಲೇ ಎಸಿ, ತಹಸೀಲ್ದಾರ್, ಡಿಎಚ್‌ಒ ಸೇರಿದಂತೆ ಸಿಎಂ ಅವರಿಗೂ ಮನವಿ ಸಲ್ಲಿಸಿ ಆಸ್ಪತ್ರೆಯ ಅವ್ಯವಸ್ಥೆಯ ಕರ್ಮಕಾಂಡವನ್ನು ಗಮನಕ್ಕೆ ತಂದಿದ್ದೇವೆ. ಇಷ್ಟಾದರೂ ಆಸ್ಪತ್ರೆಯ ಅವ್ಯಸ್ಥೆಯನ್ನು ಸರಿಪಡಿಸಲು ಮುಂದಾಗದೇ ಇರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಹೋರಾಟವನ್ನು ತೀವ್ರಗೊಳಿಸಿದ್ದು, ನಮ್ಮ ಸಂಘಟನೆಯ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಸೇನೆಯ ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ, ಜಿಲ್ಲಾ ಸಂಚಾಲಕ ಹುಸೇನ್ ಭಾಷಾ ಇಂದಿರಾನಗರ, ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬೂದೇಶ ಮರಾಠ, ತಾಲೂಕು ಉಪಾಧ್ಯಕ್ಷ ಗದ್ದೆಪ್ಪ, ಸದ್ದಾಂ, ಎಂ.ಡಿ.ನಬಿ, ಮಲ್ಲಿಕಾರ್ಜುನ, ಅಬ್ದುಲ್ ನಬಿ, ಮಹ್ಮದ್ ಸಾಬ್ ಚಿಟಗಿ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀದೇವಿ ಹನುಮಂತ, ನಗರ ಮಹಿಳಾ ಘಟಕದ ಅಧ್ಯಕ್ಷೆ ಪಾವನಿ ಸೇರಿದಂತೆ ಇನ್ನಿತರರು ಇದ್ದರು.


Spread the love

Leave a Reply

Your email address will not be published. Required fields are marked *