ಸಿಂಧನೂರು: ಬೆಳಗಾವಿಯಲ್ಲಿ ಲಾಠಿಚಾರ್ಜ್ ಖಂಡಿಸಿ ಪಂಚಮಸಾಲಿ ಸಮಾಜದಿಂದ ಪ್ರತಿಭಟನಾ ಮೆರವಣಿಗೆ, ರಾಜ್ಯಪಾಲರಿಗೆ ಮನವಿ ರವಾನೆ

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಡಿಸೆಂಬರ್ 13

2ಎ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಎದುರು ಹೋರಾಟ ನಡೆಸಿದ ಪಂಚಮಸಾಲಿ ಸಮಾಜದವರ ಮೇಲೆ ಸರ್ಕಾರ ಪೊಲೀಸರ ಮೂಲಕ ದೌರ್ಜನ್ಯ ನಡೆಸಿದೆ ಎಂದು ಆರೋಪಿಸಿ, ತಾಲೂಕು ಪಂಚಮಸಾಲಿ ಸಮಾಜದಿಂದ ನಗರದ ಎಪಿಎಂಸಿಯ ಗಣೇಶ ಗುಡಿಯಿಂದ ತಹಸೀಲ್ ಕಚೇರಿಯವರಿಗೆ ಪ್ರತಿಭಟನಾ ಮೆರವಣಿ ನಡೆಸಿ ತಹಸೀಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಶುಕ್ರವಾರ ಮನವಿ ರವಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪಂಚಮಸಾಲಿ ಸಮುದಾಯದ ಹಿರಿಯ ಮುಖಂಡ ಟಿ.ಪಂಪನಗೌಡ ಅವರು, 2ಎ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಪಂಚಮಸಾಲಿ ಸಮುದಾಯದ ಬಂಧುಗಳು ಶಾಂತಿಯುತ ಹೋರಾಟ ನಡೆಸಿದಾಗ್ಯೂ ಸರ್ಕಾರ ಪೊಲೀಸರ ಮೂಲಕ ಲಾಠಿಚಾರ್ಜ್ ಮಾಡಿಸಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ರೀತಿ ವರ್ತಿಸುವುದು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಇದನ್ನು ಖಂಡಿಸಿ ಸಮುದಾಯದಿಂದ ಹೋರಾಟ ತೀವ್ರಗೊಳಿಸಲಾಗುವುದು” ಎಂದು ಆಕ್ರೋಶ ವ್ಯಕ್ತಪಡಿಸಿದರು.
ವೀರಭದ್ರಪ್ಪ ರಂಗಾಪುರ ವಕೀಲರು ಮಾತನಾಡಿ, ಮಾನ್ಯ ಮುಖ್ಯಮಂತ್ರಿಗಳು ಪಂಚಮಸಾಲಿ ಸಮುದಾಯದ ಬಹುದಿನದ ಬೇಡಿಕೆಯನ್ನು ಈಡೇರಿಸಲು ಮುಂದಾಗಬೇಕೇ ಹೊರತು, ಹೋರಾಟವನ್ನು ಹತ್ತಿಕ್ಕಬಾರದು. ಸಮಾಜ ನ್ಯಾಯಯುತವಾದ ಬೇಡಿಕೆಯನ್ನು ಮುಂದಿಟ್ಟುಕೊAಡು ಹೊರಟಿದ್ದು, ಎಷ್ಟೇ ದೌರ್ಜನ್ಯ ನಡೆಸಿದರೂ ಹೋರಾಟ ಕೈಬಿಡುವುದಿಲ್ಲ” ಎಂದು ಹೇಳಿದರು. ಈ ಸಂದರ್ಭದಲ್ಲಿ ಮುಖಂಡರಾದ ಚಿನ್ನನಗೌಡ ಗೋನಾಳ, ಸಿದ್ರಾಮೇಶ ಮನ್ನಾಪುರ, ಬಸವರಾಜ ಸಿಂಗಾಪುರ ಸೇರಿದಂತೆ ಇನ್ನಿತರರು ಇದ್ದರು.


Spread the love

Leave a Reply

Your email address will not be published. Required fields are marked *