ನಮ್ಮ ಸಿಂಧನೂರು, ಜನವರಿ 17
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ಶ್ರೀಮತಿ ಎಕೆಆರ್‌ಡಿ ಪಿಯು ಸೈನ್ಸ್ ಕಾಲೇಜು ಪ್ರಾರಂಭವಾಗಿ 21 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನೆನಪಿಗಾಗಿ 21ರ ಸಂಭ್ರಮ ಆಚರಣೆಯ ನಿಮಿತ್ತ ಪ್ರತಿಭಾವಂತ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಇದೇ ಜನವರಿ 19 ಭಾನುವಾರದಂದು ಬೆಳಿಗ್ಗೆ ವಿದ್ಯಾರ್ಥಿವೇತನ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಶೇ.100ರಷ್ಟು ವಿದ್ಯಾರ್ಥಿ ವೇತನ ನೀಡಲಾಗುವುದು ಜೊತೆಗೆ ಎಕೆಆರ್‌ಡಿ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿಗೆ ದಾಖಲಾತಿ ಪಡೆಯುವಾಗ ಶುಲ್ಕದಲ್ಲಿ ವಿನಾಯಿತಿ ನೀಡಲಾಗುವುದು ಎಂದು ಕಾಲೇಜು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, 2025ನೇ ಸಾಲಿನ ಎಸ್.ಎಸ್.ಎಲ್.ಸಿ.ಯಲ್ಲಿ ಶೇ.95% ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಮತ್ತು ವಸತಿ ಸೌಲಭ್ಯ ಮತ್ತು ಶೇ.90%ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ಉಚಿತ ಪ್ರವೇಶ ಮತ್ತು ವಸತಿಯಲ್ಲಿ ಶೇ.50% ರಿಯಾಯಿತಿ, ಶೇ.85%ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು. ಪರೀಕ್ಷೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ನೋಂದಣಿ ಕಡ್ಡಾಯವಾಗಿದ್ದು, ನೋಂದಣಿ ದಿನಾಂಕ
19-01-2025 ರವರೆಗೆ ಇರುತ್ತದೆ. ನೋಂದಣಿ ಶುಲ್ಕ 50 ರೂಪಾಯಿ ನಿಗದಿಗೊಳಿಸಲಾಗಿದ್ದು, ಶ್ರೀಮತಿ ಎ.ಕೆ.ಆರ್.ದೇವಿ ಪ.ಪೂ.ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಈ ಮೊಬೈಲ್ 9448093107, 7259995097, 9448481767 ನಂಬರ್‌ಗಳಿಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದೆ.