ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜೂನ್ 24
ನಗರದ ಪ್ರವಾಸಿ ಮಂದಿರಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಹಳೆಯ ಪ್ರವಾಸಿ ಮಂದಿರದ ಕೊಠಡಿಗಳು ಶಿಥಿಲಗೊಂಡಿದ್ದು, ಕೆಲ ಪರಿಕರಗಳು ಹಾಗೂ ಸಾಮಗ್ರಿಗಳು ಮುರಿದು ಹೋಗಿರುವುದನ್ನು ಈ ಸಂದರ್ಭದಲ್ಲಿ ವೀಕ್ಷಿಸಿದರು. ಪ್ರವಾಸಿ ಮಂದಿರ ಅವ್ಯವಸ್ಥೆಯ ಗೂಡಾಗಿರುವ ಬಗ್ಗೆ ಕೆಲ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಶಾಸಕರು ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿ, ಮುಂದಿನ ಕ್ರಮದ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ತಾಲೂಕು ಪಂಚಾಯಿತಿ ಇಒ ಚಂದ್ರಶೇಖರ ಸೇರಿದಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು ಇನ್ನಿತರರು ಇದ್ದರು.
