ಸಿಂಧನೂರು: ಬಜರಂಗ ದಳದಿಂದ ತಹಸಿಲ್ ಕಚೇರಿ ಮುಂದೆ ಪ್ರತಿಭಟನೆ, ಡಿಸಿಗೆ ಮನವಿ

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜುಲೈ 14

ಭಜರಂಗದಳದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಗೋರಕ್ಷಣೆಗಾಗಿ ಅಕ್ರಮ ಕಸಾಯಿಖಾನೆಗಳು ಮತ್ತು ಅನಧಿಕೃತ ಖಾನಾವಳಿಗಳನ್ನು ತಕ್ಷಣವೇ ಮುಚ್ಚುವಂತೆ ಆಗ್ರಹಿಸಿ, ವಿಶ್ವ ಹಿಂದೂ ಪರಿಷತ್ ಬಜರಂಗದಳ ತಾಲೂಕು ಸಮಿತಿ ವತಿಯಿಂದ ತಹಸಿಲ್ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ರವಾನಿಸಲಾಯಿತು.
ಪ್ರತಿಭಟನಾಕಾರರು 7 ಬೇಡಿಕೆಗಳುಳ್ಳ ಮನವಿಪತ್ರವನ್ನು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ರವಾನಿಸಿದರು. ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಂಚಾಲಕ ಬಸವರಾಜ ಸಾಲಗುಂದಾ, ಬಿಜೆಪಿ ಮುಖಂಡ ಕೆ.ಕರಿಯಪ್ಪ, ರವಿ ಉಪ್ಪಾರ ಸೇರಿದಂತೆ ಬಜರಂಗ ದಳದ ಹಲವು ಕಾರ್ಯಕರ್ತರು ಇದ್ದರು.


Spread the love

Leave a Reply

Your email address will not be published. Required fields are marked *