ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜುಲೈ 15
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭಕ್ಕೆ ಆಗಮಿಸಿದ್ದ ಶಾಸಕ ಹಂಪನಗೌಡ ಬಾದರ್ಲಿ ಅವರು, ಕಾರ್ಯಕ್ರಮಕ್ಕೂ ಮುನ್ನ ವಿದ್ಯಾರ್ಥಿನಿಯರಿಂದ ಸಮಸ್ಯೆಗಳನ್ನು ಕೇಳಿ ತಾವೇ ಡೈರಿಯಲ್ಲಿ ಬರೆದುಕೊಂಡ ಪ್ರಸಂಗ ನಡೆಯಿತು.
“ಕಾಲೇಜಿಗೆ ಹೋಗಲು ರಸ್ತೆ ಸಮಸ್ಯೆ ಇದೆ, ಪುಸ್ತಕಗಳ ಕೊರತೆ, ಸಾರಿಗೆ ಬಸ್, ಕಾಂಪೌAಡ್ ಹಾಗೂ ಹಾಸ್ಟೆಲ್ ವ್ಯವಸ್ಥೆ ಸೇರಿದಂತೆ ಇನ್ನಿತರೆ ಮೂಲ ಸೌಕರ್ಯಗಳ ಕೊರತೆಯನ್ನು” ವಿದ್ಯಾರ್ಥಿನಿಯರು ಶಾಸಕರ ಮುಂದೆ ಪ್ರಸ್ತಾಪಿಸಿದರು. ಇದಕ್ಕೆ ಸ್ಪಂದಿಸಿದ ಶಾಸಕ ಹಂಪನಗೌಡ ಬಾದರ್ಲಿ ಅವರು, ವಿದ್ಯಾರ್ಥಿನಿಯರು ಪ್ರಸ್ತಾಪಿಸಿದ ಸಮಸ್ಯೆಗಳ ಕುರಿತು ಸಂಬAಧಿಸಿದ ಇಲಾಖೆಯ ಅಧಿಕಾರಿಗಳು, ಎಂಜಿನಿಯರ್‌ಗಳೊAದಿಗೆ ದೂರವಾಣಿಯಲ್ಲಿ ಸಂಪರ್ಕಿಸಿ ಮಹಿಳಾ ಸ್ನಾತಕೋತ್ತರ ಕೇಂದ್ರಕ್ಕೆ ಅಗತ್ಯ ಮೂಲ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

‘ಮಹಿಳಾ ಪಿಜಿ ಸೆಂಟರ್ ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಸೌಲಭ್ಯ ಶೀಘ್ರ’
ನಂತರ ದ್ವಿತೀಯ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಶಾಸಕ ಹಂಪನಗೌಡ ಬಾದರ್ಲಿ ಅವರು “ಸ್ನಾತಕೋತ್ತರ ವಿದ್ಯಾರ್ಥಿನಿಯರು ಹಾಸ್ಟೆಲ್ ಸಮಸ್ಯೆ ಕುರಿತು ಹಲವು ದಿನಗಳಿಂದ ಪ್ರಸ್ತಾಪಿಸುತ್ತ ಬಂದಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲಾಗಿದೆ. 100 ವಿದ್ಯಾರ್ಥಿನಿಯರ ಸಾಮರ್ಥ್ಯ ಹಾಸ್ಟೆಲ್ ಮಂಜೂರಾಗಿದೆ. ಪಿಜಿ ಸೆಂಟರ್ ಪಕ್ಕದಲ್ಲಿ ಆದಷ್ಟು ಬೇಗ ಹಾಸ್ಟೆಲ್ ಕಟ್ಟಡ ನಿರ್ಮಾಣವಾಗಲಿದೆ. ಈಗಾಗಲೇ ಹಾಸ್ಟೆಲ್ ಕಟ್ಟಡ ಸೇರಿದಂತೆ ಇನ್ನಿತರೆ ಅಗತ್ಯತೆಗಳಿಗೆ 10 ಕೋಟಿ ರೂಪಾಯಿಯನ್ನು ಸರ್ಕಾರ ಮಂಜೂರು ಮಾಡಿದೆ” ಎಂದು ವಿವರಿಸಿದರು.
‘ಶಾಸಕರ ಅನುದಾನದಲ್ಲಿ ಮೂಲ ಸೌಕರ್ಯಕ್ಕೆ ಹಣ’
ಪಿಜಿ ಸೆಂಟರ್‌ನಲ್ಲಿ ಅತ್ಯುತ್ತಮ ಲೈಬ್ರರಿ ನಿರ್ಮಿಸಲು ಅಗತ್ಯವಿರುವ ಪುಸ್ತಕಗಳಿಗಾಗಿ ಶಾಸಕರ ಅನುದಾನದಲ್ಲಿ ಹಣ ಬಿಡುಗಡೆಗೊಳಿಸಲಾಗುವುದು. ಲ್ಯಾಬೊರೇಟರಿ, ಕುಡಿಯುವ ನೀರಿನ ಆರ್.ಒ.ಪ್ಲಾಂಟ್, ಸಾರಿಗೆ ಬಸ್ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರದ ಗಮನ ಸೆಳೆದು ಅನುದಾನ ಒದಗಿಸಲಾಗುವುದು. ರಾಜ್ಯ ಸರ್ಕಾರ ಮಹಿಳೆಯರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಹಣವನ್ನು ಖರ್ಚು ಮಾಡುತ್ತಿದ್ದು, ಇಲ್ಲಿ ಅಭ್ಯಾಸ ಮಾಡಿದ ವಿದ್ಯಾರ್ಥಿನಿಯರು ಉನ್ನತ ಗುರಿಯೊಂದಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಮುಂಚೂಣಿಗೆ ಬರಬೇಕು” ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಅರುಣ್‌ಕುಮಾರ್ ದೇಸಾಯಿ, ವಿಶೇಷಾಧಿಕಾರಿ ಕೆ.ಪಿ.ಸುರೇಶ, ಮಾಜಿ ಸಿಂಡಿಕೇಟ್ ಸದಸ್ಯ ಆರ್.ಸಿ.ಪಾಟೀಲ್, ಉಪನ್ಯಾಸಕರು, ಉಪನ್ಯಾಸಕಿಯರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
