ಸಿಂಧನೂರು: ಧರ್ಮಸ್ಥಳದಲ್ಲಿ ಕೊಲೆ, ಅತ್ಯಾಚಾರ ಹಾಗೂ ಅಸಹಜ ಸಾವು ಪ್ರಕರಣ ಖಂಡಿಸಿ, ಪ್ರಗತಿಪರ ಸಂಘಟನೆಗಳಿಂದ ಜುಲೈ 30ರಂದು ಪ್ರತಿಭಟನೆ

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜುಲೈ 29

ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರ ಕೊಲೆ, ಅತ್ಯಾಚಾರ ಹಾಗೂ ಅಸಹಜ ಸಾವುಗಳ ಪ್ರಕರಣ ಇಡೀ ದೇಶವಷ್ಟೇ ಅಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿದ್ದು, ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಹೈಕೋರ್ಟ್ ನ್ಯಾಯಾಧೀಶರ ಉಸ್ತುವಾರಿಯಲ್ಲಿ ಎಸ್‌ಐಟಿ ತಂಡ ತನಿಖೆ ನಡೆಸಬೇಕು ಹಾಗೂ ತಪ್ಪಿತಸ್ಥರನ್ನು ಶಿಕ್ಷಿಸಬೇಕು ಸೇರಿದಂತೆ ಇನ್ನಿತರೆ ಹಕ್ಕೊತ್ತಾಯಗಳಿಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜುಲೈ 30ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಸಂಘಟನೆಯ ಸಂಚಾಲಕರಾದ ಡಿ.ಎಚ್.ಕಂಬಳಿ, ಚಂದ್ರಶೇಖರ ಗೊರಬಾಳ, ಶಕುಂತಲಾ ಪಾಟೀಲ್, ಬಾಬರ್‌ಬೇಗ್, ಹುಸೇನ್‌ಸಾಬ್, ಬಸವರಾಜ ಬಾದರ್ಲಿ, ಕೃಷ್ಣಮೂರ್ತಿ, ಚಿಟ್ಟಿಬಾಬು ಹಾಗೂ ಶಂಕರ ಗುರಿಕಾರ ಅವರು, “ಬೆಳಿಗ್ಗೆ 11 ಗಂಟೆಗೆ ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿ, ಗಾಂಧಿಸರ್ಕಲ್ ಮೂಲಕ ತಹಸಿಲ್ ಕಾರ್ಯಾಲಯಕ್ಕೆ ತೆರಳಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿಪತ್ರ ಸಲ್ಲಿಸಲಾಗುವುದು. ಈ ಪ್ರತಿಭಟನಾ ಮೆರವಣಿಗೆಯಲ್ಲಿ ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿ ಯುವಜನರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಮನವಿ ಮಾಡಿದ್ದಾರೆ.


Spread the love

Leave a Reply

Your email address will not be published. Required fields are marked *