ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಡಿಸೆಂಬರ್ 17
ಡಿಸೆಂಬರ್ 20, 21 ರಂದು ಎರಡು ದಿನಗಳ ಕಾಲ ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಅಖಿಲ ಭಾರತ 11ನೇ ದಲಿತ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ದಲಿತ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಹುಸೇನಪ್ಪ ಅಮರಾಪುರ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಡಾ.ಜಯದೇವಿ ಗಾಯಕವಾಡ ಅವರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಉದ್ಘಾಟನಾ ಸಮಾರಂಭ, ವಿಶೇಷ ಉಪನ್ಯಾಸ ಮತ್ತು ಸಂವಾದ, ಮಹಿಳಾ ಕಾವ್ಯಯಾನ 1 ಮತ್ತು 2, ಸಾಂಸ್ಕೃತಿಕ ಕಾಯಕ್ರಮ, ಪ್ರಶಸ್ತಿ ಪ್ರದಾನ ಸಮಾರಂಭ, ಸಂಕೀರ್ಣಗೋಷ್ಠಿ, ಸಾಧಕರಿಗೆ ಸನ್ಮಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಚ್.ಎಫ್.ಮಸ್ಕಿ, ಉಪನ್ಯಾಸಕರಾದ ಡಾ.ಬಸವರಾಜ ನಾಯಕ, ರಾಮಣ್ಣ ಹಿರೇಬೇರಿಗಿ, ಡಾ.ಅರುಣುಕುಮಾರ ಬೇರಿಗಿ, ಯರಿಯಪ್ಪ ಬೆಳಗುರ್ಕಿ, ವೀರೇಶ ಕನ್ನಾರಿ ಇನ್ನಿತರರಿದ್ದರು.

