ಸಿಂಧನೂರು: ಸರ್ಕಾರಿ ಆಸ್ಪತ್ರೆ ಸುಧಾರಣೆಗೆ ಆರೋಗ್ಯ ಸಚಿವರೊಂದಿಗೆ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಚರ್ಚೆ

Spread the love

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಡಿಸೆಂಬರ್ 27

ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಅಭಿವೃದ್ಧಿ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಅವರು ಚರ್ಚಿಸಿದ್ದಾರೆ. ಈ ಕುರಿತು ಜಾಲತಾಣದಲ್ಲಿ ವಿಷಯ ಹಂಚಿಕೊAಡಿರುವ ಅವರು, ರೋಗಿಗಳಿಗೆ ಸಿ.ಟಿ.ಸ್ಕಾö್ಯನ್, ಎಮ್‌ಆರ್‌ಐ ಹಾಗೂ ಡಯಾಲಿಸಿಸ್ ಸೌಲಭ್ಯ ಕಲ್ಪಿಸುವ ಕುರಿತಂತೆ ಚರ್ಚೆ ನಡೆಸಿದ್ದಾರೆ. ಈ ಕುರಿತು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ಕಾಂಗ್ರೆಸ್ ಮುಖಂಡ ರವಿ ಭೋಸರಾಜು ಇದ್ದರು.
ಆಸ್ಪತ್ರೆಯ ಅವ್ಯವಸ್ಥೆ, ಸೌಕರ್ಯಗಳ ಕೊರತೆ ಹಾಗೂ ಸೇವಾ ಅವಧಿಯಲ್ಲಿ ವೈದ್ಯರು ಗೈರು ಹಾಜರಾಗುತ್ತಿರುವುದು ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ಸಿಪಿಐ(ಎಂ.ಎಲ್) ಲಿಬರೇಷನ್ ಪಾರ್ಟಿಯ ವತಿಯಿಂದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಸುರೇಶಗೌಡ ಅವರಿಗೆ ಮನವಿ ಸಲ್ಲಿಸಲಾಗಿತ್ತು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *