ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜನವರಿ 3
ತಾಲೂಕಿನ ಸುಕ್ಷೇತ್ರ ಅಂಬಾಮಠದ ಅಂಬಾದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ 03-01-2026ರಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಮಹಾರಥೋತ್ಸವ ಹಾಗೂ ಜಂಬೂ ಸವಾರಿಗೆ ಚಾಲನೆ ನೀಡಲಿದ್ದು, ಪ್ರತಿ ವರ್ಷದ ಸಂಪ್ರದಾಯದಂತೆ ಅಂಬಾದೇವಿ ದೇವಸ್ಥಾನದ ಆವರಣದಲ್ಲಿ ಉಚ್ಚಾಯ ಮಹೋತ್ಸವ ಶನಿವಾರ ಬೆಳಿಗ್ಗೆ ಅಪಾರ ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಉಚ್ಛಾಯ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರೀ ಅಂಬಾದೇವಿ ವ್ಯವಸ್ಥಾಪನಾ ಸಮಿತಿ ಅಂಬಾಮಠದ ವತಿಯಿಂದ ಶನಿವಾರ ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಂಗನಗೌಡ, ತಹಸೀಲ್ದಾರ್ ಅರುಣ ದೇಸಾಯಿ ಹಾಗೂ ತಾಲೂಕು ಪಂಚಾಯಿತಿ ಇಒ ಚಂದ್ರಶೇಖರ ಸೇರಿದಂತೆ ಇನ್ನಿತರರಿದ್ದರು.



