ಸಿಂಧನೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ 15 ವಿಶೇಷ ಬಸ್‌ಗಳಿಗೆ ಇಂದು ಚಾಲನೆ

Spread the love

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜನವರಿ 3

ತಾಲೂಕಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು ದಿನನಿತ್ಯ ಬಸ್ ಅಭಾವದಿಂದ ಸಮಸ್ಯೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ 15 ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದ್ದು, ದಿನಾಂಕ: 03-01-2026 ರಂದು ಹೊಸ ಬಸ್‌ಗಳು ರೋಡಿಗಿಳಿಯಲಿವೆ.
ರಾಜ್ಯದಲ್ಲಿಯೇ ಮೊದಲು
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿಯೇ ವಿಶೇಷ ಅನುದಾನವನ್ನು ಸರ್ಕಾರದಿಂದ ತರುವ ಮೂಲಕ ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸಿಂಧನೂರು ತಾಲೂಕಿನ ವಿದ್ಯಾರ್ಥಿಗಳಿಗೆ 15 ಬಸ್‌ಗಳ ವಿಶೇಷ ಸೌಲಭ್ಯವನ್ನು ಕಲ್ಪಿಸಲು ಮುಂದಾಗಲಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಅವರು ತಿಳಿಸಿದ್ದಾರೆ.

Namma Sindhanuru Click For Breaking & Local News

5 ಕೋಟಿ ರೂಪಾಯಿ ವೆಚ್ಚದಲ್ಲಿ ಹೈಟೆಕ್ ಬಸ್ ಸೌಲಭ್ಯ
ಸಿಂಧನೂರು ತಾಲೂಕಿನಲ್ಲಿ ಅಂದಾಜು 18 ಪದವಿ ಕಾಲೇಜುಗಳು, 32 ಪಿಯುಸಿ ಕಾಲೇಜ್‌ಗಳಿದ್ದು ಅಂದಾಜು 25,000 ಕಾಲೇಜು ವಿದ್ಯಾರ್ಥಿಗಳಿಗೆ ಆಯಾ ಗ್ರಾಮಗಳಿಂದ ನಗರಕ್ಕೆ ಬಂದು ಹೋಗಲು ಅನುಕೂಲವಾಗುವಂತೆ ವಿದ್ಯಾರ್ಥಿಗಳಿಗೆಂದೇ 5 ಕೋಟಿ ರೂಪಾಯಿ ವೆಚ್ಚದಲ್ಲಿ 15 ಬಸ್‌ಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಇಂದು ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *