ಲೋಕಲ್ ನ್ಯೂಸ್: ಬಸವರಾಜ ಹಸಮಕಲ್
ನಮ್ಮ ಸಿಂಧನೂರು, ಮೇ 13, 2026
ನಗರದ ಮಸ್ಕಿ ರಸ್ತೆಯ ಅರಿಹಂತ್ ಮಿಲ್ ಹತ್ತಿರ ನಿರ್ಮಾಣ ಹಂತದ ಸೇತುವೆ ಬಳಿ ಕಾರೊಂದು ಪಲ್ಟಿ ಹೊಡೆದು ಕಂದಕಕ್ಕೆ ಉರುಳಿದ ಘಟನೆ ಬುಧವಾರ ನಸುಕಿನಲ್ಲಿ ನಡೆದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದುಬಂದಿದೆ. ಮಸ್ಕಿ ಮಾರ್ಗದಿಂದ ಸಿಂಧನೂರು ಕಡೆ ಬರುತ್ತಿದ್ದ ಕಾರು ಬೆಳಿಗಿನ ಜಾವ ಪಲ್ಟಿಯಾಗಿದ್ದು, ಚಾಲಕನಿಗೆ ತಲೆಗೆ ಪೆಟ್ಟಾಗಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

