ಸಿಂಧನೂರು: ಮಳೆಗಾಗಿ ಪ್ರಾರ್ಥಿಸಿ ಜೆಡಿಎಸ್‌ನಿಂದ ಜುಲೈ 14ರಂದು ಅಂಬಾಮಠಕ್ಕೆ ಪಾದಯಾತ್ರೆ : ನಾಡಗೌಡ

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜುಲೈ 7, 2026

ಮಳೆಯಾಶ್ರಿತ ಪ್ರದೇಶದಲ್ಲಿ ಬಿತ್ತಿದ ಬೆಳೆ ಹಾನಿಗೀಡಾಗುತ್ತಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್‌ನಿಂದ ಮಳೆಗಾಗಿ ಪ್ರಾರ್ಥಿಸಿ ಸುಕ್ಷೇತ್ರ ಸಿದ್ಧಪರ್ವತ ಅಂಬಾಮಠದ ಅಂಬಾದೇವಿ ದೇವಸ್ಥಾನಕ್ಕೆ ದಿನಾಂಕ: 14-07-2026 ಮಂಗಳವಾರದAದು ಬೆಳಿಗ್ಗೆ 8 ಗಂಟೆಯಿAದ ನಗರದ ಕೋಟೆ ಈರಣ್ಣ ದೇವಸ್ಥಾನದಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹಾಗೂ ಹಾಲಿ ಕೆಒಎಫ್ ಅಧ್ಯಕ್ಷ ವೆಂಕಟರಾವ್ ನಾಡಗೌಡ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಗರದಿಂದ ಇ.ಜೆ.ಹೊಸಳ್ಳಿ, ಅಮರಾಪುರ, ಸಾಸಲಮರಿ, ರೌಡಕುಂದಾ ಸೇರಿ ವಿವಿಧ ಗ್ರಾಮಗಳ ಮೂಲಕ ಸುಕ್ಷೇತ್ರ ಅಂಬಾಮಠ ತಲುಪಲಾಗುವುದು. ಪಾದಯಾತ್ರೆ ಹಾಗೂ ವಿಶೇಷ ಪೂಜೆ ಕಾರ್ಯಕ್ರಮದಲ್ಲಿ ದೇವದುರ್ಗ ಶಾಸಕಿ ಕರಿಯಮ್ಮ, ಮಾನ್ವಿಯ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹಾಗೂ ಜೆಡಿಎಸ್‌ನ ಜಿಲ್ಲಾ ಮುಖಂಡರು, ತಾಲ್ಲೂಕಿನ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ” ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಅಶೋಕಗೌಡ ಗದ್ರಟಗಿ, ಸತ್ಯನಾರಾಯಣ, ಧರ್ಮನಗೌಡ ಮಲ್ಕಾಪುರ, ಎಸ್.ಬಿ.ಟೇಲರ್, ವೆಂಕೋಬಣ್ಣ ಕಲ್ಲೂರು, ಸುಮಿತ್ ತಡಕಲ್, ರವಿಗೌಡ ಪನ್ನೂರು, ಸೈಯ್ಯದ್ ಆಸೀಫ್ ಇನ್ನಿತರರಿದ್ದರು.


Spread the love

Leave a Reply

Your email address will not be published. Required fields are marked *