ಸಿಂಧನೂರು : ತುಂಗಭದ್ರಾ ಡ್ಯಾಂಗೆ 17,507 ಕ್ಯೂಸೆಕ್ ಒಳಹರಿವು

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜುಲೈ 8, 2026

ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 08-07-2026ರಂದು 17,507 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ನದಿಗೆ ನೀರು ಹರಿದು ಬರುತ್ತಿದ್ದು, ಅಣೆಕಟ್ಟೆಗೆ ಒಳಹರಿವು ಜಾಸ್ತಿಯಾಗಿದೆ.
ಕಳೆದ ವರ್ಷ ಇದೇ ಸಮಯದಲ್ಲಿ ಜಲಾಶಯದಲ್ಲಿ 75.93 ಟಿಎಂಸಿ ನೀರು ಸಂಗ್ರಹವಿದ್ದರೆ, 52,423 ಕ್ಯೂಸೆಕ್ ಒಳಹರಿವು ದಾಖಲಾಗಿತ್ತು, 61,145 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿತ್ತು. ತುಂಗಭದ್ರಾ ಅಣೆಕಟ್ಟಿನಲ್ಲಿ ಪ್ರಸ್ತುತ ದಿನಾಂಕ: 08-07-2026ರಂದು 11.22 ಟಿಎಂಸಿ ಮಾತ್ರ ನೀರಿನ ಸಂಗ್ರಹವಿದೆ. 170 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ.


Spread the love

Leave a Reply

Your email address will not be published. Required fields are marked *