ನಮ್ಮ ಸಿಂಧನೂರು, ಫೆಬ್ರವರಿ 27
ಜೆಸಿಬಿ ಪಕ್ಷಗಳ ಮೂಲಕ ಭ್ರಷ್ಟರು, ಅಪ್ರಾಮಾಣಿಕರು, ಸ್ವಜನಪಕ್ಷಪಾತಿಗಳು, ಸುಳ್ಳರು ಹಾಗೂ ಸಮಾಜಘಾತುಕ ಶಕ್ತಿಗಳು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿದ್ದು, ಇಂಥ ಪರಮಸ್ವಾರ್ಥಿಗಳಲ್ಲಿ ಸೋಲಿಸುವ ಮೂಲಕ ಜನಪರ ಕಾಳಜಿಯ, ಸ್ವಚ್ಛ ಮತ್ತು ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನಾಡಪ್ರೇಮಿ ಅಭ್ಯರ್ಥಿಗಳನ್ನು ಬೆಂಬಲಿಸುವA ತೆ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಮನವಿ ಮಾಡಿದರು.
ಮಂಗಳವಾರ ಸಿಂಧನೂರು ನಗರಕ್ಕೆ ಬೈಕ್ ಜಾಥಾದಲ್ಲಿ ಆಗಮಿಸಿದ್ದ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಗಾಂಧಿಸರ್ಕಲ್ನಲ್ಲಿ ಮಾತನಾಡಿದರು. ಜನರಲ್ಲಿ ರಾಜಕೀಯ ಜಾಗೃತಿ ಮೂಡಿಸುವ ಸಲುವಾಗಿ ದಿನಾಂಕ 19-02-2024 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಪ್ರಾರಂಭವಾದ ಬೈಕ್ ಜಾಥಾ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ಮಂಗಳೂರು, ಉಡುಪಿ, ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಮಾರ್ಗವಾಗಿ ಇಂದು ತಮ್ಮ ನಗರಕ್ಕೆ ಆಗಮಿಸಿದೆ ಎಂದರು ತಿಳಿಸಿದರು.
ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ ಮಾತನಾಡಿ, ಭ್ರಷ್ಟಾಚಾರ, ಸ್ವಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸಿ ಪ್ರಾದೇಶಿಕ ಪಕ್ಷವಾದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಬೆಂಬಲಿಸುವAತೆ ಮನವಿ ಮಾಡಿದರು. ಬೈಕ್ ಜಾಥಾದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎನ್., ನರಸಿಂಹ ಮೂರ್ತಿ, ಜಂಟಿ ಕಾರ್ಯದರ್ಶಿ ರಘುಪತಿ ಭಟ್, ಸಂಘಟನಾ ಕಾರ್ಯದರ್ಶಿ ಎಲ್. ಜೀವನ್, ಚಂದ್ರಶೇಖರ್ ಮಠದ, ಬಿ. ಜಿ ಕುಂಬಾರ್, ರಾಜ್ಯ ಯುವ ಘಟಕದ ಅಧ್ಯಕ್ಷ ನಿರುಪಾದಿ ಗೋಮರ್ಸಿ, ಜಿಲ್ಲಾಧ್ಯಕ್ಷ ಕುಂದೂರು ರಾಘವೇಂದ್ರ, ಜಿಲ್ಲಾ ಉಪಾಧ್ಯಕ್ಷ ಬಸವ ಪ್ರಭು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಪೊಳ್ ಇನ್ನಿತರರಿದ್ದರು.