ಕೊಪ್ಪಳ ಎಂಪಿ ಕ್ಷೇತ್ರ : ಪಕ್ಷ ಸಂಘಟಿಸಲು ಅಮರೇಗೌಡ ಪಾಟೀಲ್ ಬಯ್ಯಾಪುರ ಕರೆ

Spread the love

ನಮ್ಮ ಸಿಂಧನೂರು, ಏಪ್ರಿಲ್ 3
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಂಗಾವತಿಯ ಪಕ್ಷದ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರು ಪಕ್ಷವನ್ನು ಸಂಘಟಿಸುವ ಮೂಲಕ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರ ಗೆಲುವಿಗೆ ಶಕ್ತಿಮೀರಿ ಪ್ರಯತ್ನಿಸುವಂತೆ ಕಾರ್ಯಕರ್ತರಿಗೆ, ಮುಖಂಡರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಶಿವರಾಜ ತಂಗಡಗಿ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ್, ಗಂಗಾವತಿ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ಲಲಿತಾರಾಣಿ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.


Spread the love

Leave a Reply

Your email address will not be published. Required fields are marked *