ಕೊಪ್ಪಳ ಲೋಕಸಭಾ ಕಣ : ಏ.17ರಂದು ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ, ವಿಜಯ ಸಂಕಲ್ಪ ಸಮಾವೇಶ

Spread the love

ನಮ್ಮ ಸಿಂಧನೂರು, ಏಪ್ರಿಲ್ 16
ಕೊಪ್ಪಳ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ.ಎಸ್.ಕ್ಯಾವಟರ್ ಅವರು ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಮಧ್ಯಾಹ್ನ 1 ಗಂಟೆಗೆ ತಾಲೂಕು ಕ್ರೀಡಾಂಗಣದಲ್ಲಿ ವಿಜಯ ಸಂಕಲ್ಪ ಸಮಾವೇಶ ನಡೆಯಲಿದೆ. ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಸಿ.ಟಿ.ರವಿ, ಸಂಸದ ವೈ.ದೇವೇಂದ್ರಪ್ಪ, ಜನಾರ್ದನ ರೆಡ್ಡಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ ಸೇರಿದಂತೆ ಪಕ್ಷದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


Spread the love

Leave a Reply

Your email address will not be published. Required fields are marked *