ಕೊಪ್ಪಳ ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಬಿರುಸಿನ ಪ್ರಚಾರ

Spread the love

ನಮ್ಮ ಸಿಂಧನೂರು, ಏಪ್ರಿಲ್ 13
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರು ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟಾ, ವಜ್ರಬಂಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಹಾಗೂ ಅಭಿಮಾನಿಗಳ ಸಭೆ ನಡೆಸಿದರು. ತದನಂತರ ಮತದಾರರನ್ನು ಭೇಟಿಯಾಗಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಸೇರಿದಂತೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದರೆ ಜಾರಿಗೆ ತರಲಿರುವ ಹಲವು ಗ್ಯಾರಂಟಿ ಯೋಜನೆಗಳ ಕುರಿತು ಮನವರಿಕೆ ಮಾಡಿದರು.
ತಾಳಕೇರಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಮತದಾರರಿಗೆ ತಿಳಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರ ಗೆಲುವಿಗೆ ಕಂಕಣಬದ್ಧರಾಗಿ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *