ನಮ್ಮ ಸಿಂಧನೂರು, ಏಪ್ರಿಲ್ 13
ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ.ಎಸ್.ಕ್ಯಾವಟರ್ ಹಾಗೂ ಕಾಂಗ್ರೆಸ್‌ನ ರಾಜಶೇಖರ್ ಹಿಟ್ನಾಳ್ ಅವರು ಸಾಂಕೇತಿಕವಾಗಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್ ಪಾಟೀಲ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ, ಜೆ.ಡಿ.ಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರೆಡ್ಡಿ, ಮಾಜಿ ಶಾಸಕ ಬಸವರಾಜ ದಡೇಸೂಗುರು, ಜೆ.ಡಿ.ಎಸ್ ಜಿಲ್ಲಾ ಮಾಜಿ ಅಧ್ಯಕ್ಷ ವಿರೇಶ ಮಹಾಂತಯ್ಯಮಠ, ಪ್ರಮುಖರಾದ ಶ್ರೀ ರಾಜು ಬಾಕಳೆ ಸೇರಿದಂತೆ ಇನ್ನಿತರರಿದ್ದರು. ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಸಿರುಗುಪ್ಪದ ಶಾಸಕರಾದ ಬಿ.ಎಮ್ ನಾಗರಾಜ, ಕಾಂಗ್ರೆಸ್ ಮುಖಂಡರಾದ ಎಸ್.ಬಿ.ನಾಗರಳ್ಳಿ, ಆಸೀಫ್ ಅಲಿ, ಗೂಳಪ್ಪ ಹಲಿಗೇರಿ ಇದ್ದರು.