ಸಿಂಧನೂರು : ನಗರಸಭೆ ಮಾಜಿ ಉಪಾಧ್ಯಕ್ಷ ಎಂ.ಡಿ.ನದೀಮುಲ್ಲಾ ಕಾಂಗ್ರೆಸ್ ಸೇರ್ಪಡೆ

Spread the love

ನಮ್ಮ ಸಿಂಧನೂರು, ಏಪ್ರಿಲ್ 16
ನಗರಸಭೆ ಮಾಜಿ ಉಪಾಧ್ಯಕ್ಷ, ಜೆಡಿಎಸ್‌ನ ಪ್ರಮುಖ ಮುಖಂಡ ಹಾಗೂ ವೆಂಕಟರಾವ್ ನಾಡಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಎಂ.ಡಿ.ನದೀಮುಲ್ಲಾ ಹಾಗೂ ನಗರಸಭೆ ಮಾಜಿ ಸದಸ್ಯ ಹಾಜಿ ಮಸ್ತಾನ್ ಅವರು ಜೆಡಿಎಸ್ ತೊರೆದು ಅಧಿಕೃತವಾಗಿ ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮುಖಂಡರನ್ನು ಶಾಸಕ ಹಂಪನಗೌಡ ಬಾದರ್ಲಿ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಸ್ವಾಗತಿಸಿದರು. ಈ ವೇಳೆ ಜೆಡಿಎಸ್ ಮುಖಂಡರಾದ ಮುಜಾಫರ್ ಖಾನ್, ಅಜರ್ ಖಾನ್, ಚಾಂದ್‌ಪಾಷ , ಮಹೆಬೂಬ್ ಎತ್ಮಾರಿ ಸೇರಿದಂತೆ ಇನ್ನಿತರರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಎಂ.ಕಾಳಿಂಗಪ್ಪ ವಕೀಲ, ಪಂಪನಗೌಡ ಬಾದರ್ಲಿ, ನಗರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ನಗರಸಭೆ ಸದಸ್ಯ ಶೇಖರಪ್ಪ ಗಿಣಿವಾರ, ಲಿಂಗಾಧರ ಗುರುಸ್ವಾಮಿ ಸೇರಿದಂತೆ ಇನ್ನಿತರರಿದ್ದರು.

Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *