ನಮ್ಮ ಸಿಂಧನೂರು, ಮೇ 14
ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಪಾಲಕರಿಂದ ದುಬಾರಿ ಶುಲ್ಕ ವಸೂಲಿ ಮಾಡುವ ಮೂಲಕ ಹಗಲು ದರೋಡೆಗೆ ಇಳಿದಿವೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಪರದಾಡುವಂತಾಗಿದೆ. ಕೂಡಲೇ ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಿಪಿಐ(ಎಂಎಲ್) ರೆಡ್ಸ್ಟಾರ್ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಅಧಿಕಾರಿ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಮನವಿ ರವಾನಿಸಿ ಒತ್ತಾಯಿಸಿದೆ.
“ಶಿಕ್ಷಣದಲ್ಲಿ ಖಾಸಗೀಕರಣ, ವ್ಯಾಪಾರೀಕರಣ, ಕೆಸರೀಕರಣ ಮಿತಿಮೀರಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಆ ಮೂಲಕ ಉಚಿತ ಮತ್ತು ಕಡ್ಡಾಯ ಹಾಗೂ ವೈಜ್ಞಾನಿಕ ಶಿಕ್ಷಣದ ಸಮರ್ಪಕ ಜಾರಿಗೆ ಸರ್ಕಾರ ಮುಂದಾಗಬೇಕು” ಎಂದು ಸಮಿತಿಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಸಿಪಿಐ(ಎಂಎಲ್) ರೆಡ್ಸ್ಟಾರ್ನ ಮುಖಂಡರಾದ ಎಂ.ಗಂಗಾಧರ, ರೆಡ್ಡಿ ಸೇರಿದಂತೆ ವಿದ್ಯಾರ್ಥಿ ಮುಖಂಡರು ಇದ್ದರು.