ನಮ್ಮ ಸಿಂಧನೂರು, ಏಪ್ರಿಲ್ 10
ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಲಿಂಗಸುಗೂರಿನ ಚುನಾವಣಾ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ತರಬೇತಿ ಸಿಬ್ಬಂದಿ ಹಾಗೂ ಪಿಆರ್ಒ, ಎಪಿಆರ್ಒ ಅವರೊಂದಿಗೆ ಜಿಲ್ಲಾಧಿಕಾರಿಗಳು ಕೆಲವೊತ್ತು ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಅಧಿಕಾರಿಗಳು, ಚುನಾವಣಾ ಅಧಿಕಾರಿಗಳು ಸೇರಿದಂತೆ ಇನ್ನಿತರರು ಇದ್ದರು.