ಕುಡಿಯುವ ನೀರಿನ ಸಮಸ್ಯೆ: ಮಾರ್ಚ್ 5ರಿಂದ ತುಂಗಭದ್ರಾ ಎಡದಂಡೆ ನಾಲೆಗೆ ನೀರು

Spread the love

ನಮ್ಮ ಸಿಂಧನೂರು, ಮಾರ್ಚ್ 4
ತುಂಗಭದ್ರಾ ಡ್ಯಾಂ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ತೀವ್ರ ಅಭಾವದ ಹಿನ್ನೆಲೆಯಲ್ಲಿ, ಜಲಾಶಯದಲ್ಲಿನ ನೀರಿನ ಲಭ್ಯತೆ ಆಧರಿಸಿ ವಿಜಯನಗರ, ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ನೀರು ಹಂಚಿಕೆ ಮಾಡಿ ಫೆಬ್ರವರಿ 25ರಂದು ತುಂಗಭದ್ರಾ ಯೋಜನೆಯ 121ನೇ ತುರ್ತು ನೀರಾವರಿ ಸಲಹಾ ಸಮಿತಿ ಬೆಂಗಳೂರಿನಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಂಡಿದೆ.
ಮಾರ್ಚ್ 5ರಿಂದ 12ರವರೆಗೆ
ಈ ಹಿನ್ನೆಲೆಯಲ್ಲಿ ತುಂಗಭದ್ರಾ ಎಡದಂಡೆ ಮುಖ್ಯಕಾಲುವೆ ಮೂಲಕ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಗಣೇಕಲ್ ಜಲಾಶಯ ಹಾಗೂ ಇತರೆ ಕೆರೆ ಕಟ್ಟೆಗಳಿಗೆ ಮಾರ್ಚ್ 5ರಿಂದ ಮಾರ್ಚ್ 16 ರವರೆಗೆ 1,200 ಕ್ಯೂಸೆಕ್‌ನಂತೆ ಕುಡಿವ ನೀರು ಹರಿಬಿಡಲಾಗುತ್ತದೆ. ತುಂಗಭದ್ರಾ ಕಾಲುವೆಗಳಿಗೆ ನೀರು ಹರಿಸಿದ ಸಂದರ್ಭಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ. ಆ ಸಂದರ್ಭದಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು, ನಿಯೋಜಿಸಲ್ಪಟ್ಟ ಸಿಬ್ಬಂದಿಗಳಿಗೆ ಮಾತ್ರ ಪ್ರವೇಶವಿರುತ್ತದೆ. ಅನಧಿಕೃತವಾಗಿ ಪಂಪ್‌ಸೆಟ್ ಮೂಲಕ ನೀರನ್ನು ಸಾಗಿಸುವುದನ್ನು ನಿಷೇಧಿಸಲಾಗುತ್ತದೆ. ಕಾಲುವೆಗಳಿಗೆ ನೀರು ಹರಿಸುವ ಸಂದರ್ಭದಲ್ಲಿ ಸಂಬAಧಿಸಿದ ಜಿಲ್ಲಾಧಿಕಾರಿಗಳು ಕಲಂ 144ನ್ನು ಜಾರಿಗೊಳಿಸಿ, ಸೂಕ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಿ ನೀರಿನ ಕೆರೆ ಕಟ್ಟೆಗಳನ್ನು ತುಂಬಿಸಿಕೊಳ್ಳಲು ಸಭೆಯಲ್ಲಿ ಸೂಚನೆ ನೀಡಲಾಗಿದೆ.

Namma Sindhanuru Click For Breaking & Local News

ಸಲಹಾ ಸಮಿತಿ ಸಭೆಯ ನಿರ್ಣಯಗಳು:
* ತುಂಗಭದ್ರಾ ಎಡದಂಡೆ ಮುಖ್ಯಕಾಲುವೆ ಮೂಲಕ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಿಗೆ ಗಣೇಕಲ್ ಜಲಾಶಯ ಹಾಗೂ ಇತರೆ ಕೆರೆ-ಕಟ್ಟೆಗಳಿಗೆ ಮಾರ್ಚ್ ೫ರಿಂದ ಮಾರ್ಚ್ ೧೬ರವರೆಗೆ ೧,೨೦೦ ಕ್ಯೂಸೆಕ್‌ನಂತೆ ಕುಡಿವ ನೀರು ಹರಿಸುವುದು.
* ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ ಮೂಲಕ ಬಳ್ಳಾರಿ ಜಿಲ್ಲೆಗೆ ಮತ್ತು ಇತರೆ ಗ್ರಾಮೀಣ ಕುಡಿವ ನೀರಿನ ಯೋಜನೆಗಳಿಗೆ ಮಾರ್ಚ್ ೧೦ರಿಂದ ಮಾರ್ಚ್ ೨೦ರವರೆಗೆ ೧೦೦ ಕ್ಯೂಸೆಕ್‌ನಂತೆ ಹಾಗೂ ಅಗತ್ಯಕ್ಕೆ ಅನುಗುಣವಾಗಿ ಮಾ.೨೧ರಿಂದ ಮಾ.೩೧ರವರೆಗೆ ೧೦೦ ಕ್ಯೂಸೆಕ್‌ನಂತೆ ಕುಡಿವ ನೀರಿನ ಯೋಜನೆಗೆ ಹಾಗೂ ಕೆರೆ-ಕಟ್ಟೆಗಳನ್ನು ತುಂಬಿಸುವುದು.
* ರಾಯ-ಬಸವಣ್ಣ ಕಾಲುವೆಯಿಂದ ವಿಜಯನಗರ ಜಿಲ್ಲೆಗೆ ಹಂಚಿಕೆಯಾದ ೦.೨೬೦ ಟಿಎಂಸಿ ನೀರಿನಲ್ಲಿ ಮಾ.೧ರಿಂದ ಮೇ ೩೦ರವರೆಗೆ ೧೦೦ ಕ್ಯೂಸೆಕ್‌ನಂತೆ ಆನ್-ಆಫ್‌ನಂತೆ ಕುಡಿವ ನೀರನ್ನೊಳಗೊಂಡು ಹರಿಸುವುದು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *