ಕೊಪ್ಪಳ ಎಂ.ಪಿ ಕ್ಷೇತ್ರ: ಮಾಜಿ ಸಂಸದ, ಕಾಂಗ್ರೆಸ್ ಮುಖಂಡ ಶಿವರಾಮಗೌಡ ಪುನಃ ಬಿಜೆಪಿಗೆ ?

Spread the love

(ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿ)
ನಮ್ಮ ಸಿಂಧನೂರು, ಏಪ್ರಿಲ್ 4

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದ್ದು, ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಗಂಗಾವತಿಯ ಶಿವರಾಮಗೌಡ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಹಾಲಿ ಸಂಸದರಾಗಿದ್ದಾಗ್ಯೂ ಟಿಕೆಟ್ ನಿರಾಕರಿಸಿದ್ದರಿಂದ ಮುನಿಸಿಕೊಂಡು ಈ ಹಿಂದೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಪಾಳಯಕ್ಕೆ ಪಲಾಯನ ಮಾಡಿದ್ದ ಶಿವರಾಮಗೌಡ ಅವರು ನಂತರ ಹಲವು ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿದ್ದರು. ಆದರೆ ಇತ್ತೀಚಿನ ದಿಢೀರ್ ಬೆಳವಣಿಗೆಯ ಹಿನ್ನೆಲೆಯಲ್ಲಿ ಪುನಃ ಬಿಜೆಪಿ ಪಕ್ಷಕ್ಕೆ ಸೇರಿಕೊಳ್ಳಲಿದ್ದಾರೆ ಎಂದು ಗೊತ್ತಾಗಿದೆ. ಮೇ ೫ರಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಪಕ್ಷದ ಪ್ರಮುಖರ ಸಮ್ಮುಖದಲ್ಲಿ ಪುನಃ ಮಾತೃ ಪಕ್ಷದ ಧ್ವಜ ಹಿಡಿಯಲಿದ್ದಾರೆಂದು ಗೊತ್ತಾಗಿದೆ.
೨೦೦೯ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್‌ನ ಬಸವರಾಜ ರಾಯರೆಡ್ಡಿ ಅವರನ್ನು ಪರಾಭವಗೊಳಿಸಿದ್ದರು. ತದನಂತರ ೨೦೧೪ರಲ್ಲಿ ಬಿಜೆಪಿ ಹೈಕಮಾಂಡ್ ಇವರಿಗೆ ಟಿಕೆಟ್ ನಿರಾಕರಿಸಿ ಸಂಗಣ್ಣ ಕರಡಿ ಅವರಿಗೆ ನೀಡಿತ್ತು. ಇದರಿಂದ ಕೆಲಕಾಲ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಕಾಂಗ್ರೆಸ್‌ನಿAದ ಗಂಗಾವತಿ ವಿಧಾನಸಭೆ ಕ್ಷೇತ್ರದ ಎಮ್ಮೆಲ್ಲೆ ಟಿಕೆಟ್ ಆಕಾಂಕ್ಷಿಯಾಗಿದ್ದರು ಎಂದು ಹೇಳಲಾಗಿತ್ತು. ತದನಂತರ ಕೊಪ್ಪಳ ಲೋಕಸಭೆಗೂ ಟಿಕೆಟ್ ಆಕಾಂಕ್ಷಿಯಾಗಿದ್ದರು ಎಂದು ತಿಳಿದುಬಂದಿತ್ತು. ಆದರೆ, ಈ ಬಗ್ಗೆ ಕಾಂಗ್ರೆಸ್ ಪಕ್ಷ ಸ್ಪಷ್ಟ ನಿರ್ಧಾರಕ್ಕೆ ಬರದ ಹಿನ್ನೆಲೆಯಲ್ಲಿ ಪುನಃ ಬಿಜೆಪಿ ಪಕ್ಷಕ್ಕೆ ಸೇರುತ್ತಿದ್ದಾರೆಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿವೆ.


Spread the love

Leave a Reply

Your email address will not be published. Required fields are marked *