ಕೊಪ್ಪಳ ಎಂಪಿ ಕ್ಷೇತ್ರ: ಮಾಜಿ ಸಂಸದ ಶಿವರಾಮಗೌಡ ಬಿಜೆಪಿ ಸೇರ್ಪಡೆ

Spread the love

ನಮ್ಮ ಸಿಂಧನೂರು, ಏಪ್ರಿಲ್‌ 6
ಕೊಪ್ಪಳ ಲೋಕಸಭೆ ಮಾಜಿ ಸಂಸದ ಗಂಗಾವತಿಯ ಶಿವರಾಮಗೌಡ ಅವರು ಬೆಂಗಳೂರಿನಲ್ಲಿ ಶುಕ್ರವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ, ಪ್ರತಿ ಪಕ್ಷದ ನಾಯಕ ಆರ್‌.ಅಶೋಕ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. 2009ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಕಾಂಗ್ರೆಸ್‌ನ ಬಸವರಾಜ ರಾಯರೆಡ್ಡಿ ಅವರನ್ನು ಪರಾಭವಗೊಳಿಸಿದ್ದರು. ಎರಡನೇ ಅವಧಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಿದ ಹಿನ್ನೆಲೆಯಲ್ಲಿ ಅವರು ಕೆಲ ದಿನಗಳ ನಂತರ ಬಿಜೆಪಿಯನ್ನು ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.


Spread the love

Leave a Reply

Your email address will not be published. Required fields are marked *