ಕೊಪ್ಪಳ : ಹುಲಿಗಿ ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿ 100 ಕೋಟಿ ಮಂಜೂರಿಗೆ ಹಿಟ್ನಾಳ್ ಮನವಿ

Spread the love

ನಮ್ಮ ಸಿಂಧನೂರು, ಅಕ್ಟೋಬರ್ 16
ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಧಾರ್ಮಿಕ ಕೇಂದ್ರ ಹುಲಿಗಿಯ ಹುಲಿಗೆಮ್ಮ ದೇವಸ್ಥಾನದ ಅಭಿವೃದ್ಧಿಗೆ 100 ಕೋಟಿ ರೂಪಾಯಿ ಅನುದಾನ ಒದಗಿಸುವಂತೆ ಕೇಂದ್ರದ ಮೂಲಭೂತ ಸೌಕರ್ಯ ಹಾಗೂ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಕಾವತ್ ಅವರನ್ನು ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ್ ಹೊಸದಿಲ್ಲಿಯಲ್ಲಿ ಭೇಟಿಮಾಡಿ ಮನವಿ ಮಾಡಿದ್ದಾರೆ. ಪ್ರಮುಖ ಧಾರ್ಮಿಕ ಕೇಂದ್ರವಾಗಿರುವ ದೇವಸ್ಥಾನ ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿದ್ದು, ಭಕ್ತರಿಗೆ ಮೂಲ ಸೌಲಭ್ಯಗಳನ್ನು ಒದಗಿಸಲು ಅನುದಾನ ಒದಗಿಸುವಂತೆ ಅವರು ಗಮನ ಸೆಳೆದಿದ್ದಾರೆ.


Spread the love

Leave a Reply

Your email address will not be published. Required fields are marked *