ಮಸ್ಕಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬುದ್ದಿನ್ನಿ.ಎಸ್. ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ

Spread the love

ನಮ್ಮ ಸಿಂಧನೂರು, ಮೇ 10
ಮಸ್ಕಿ ತಾಲೂಕಿನ ಬುದ್ದಿನ್ನಿ.ಎಸ್ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, 24 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಅನಿಲಕುಮಾರ್ 499 (79.81%), ಹುಸೇನಬೀ 472 (75.52%), ರೇಖಾ 444 (ಶೇ.71.04) ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಎಸ್ಡಿಎಂಸಿ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.


Spread the love

Leave a Reply

Your email address will not be published. Required fields are marked *