ಮಸ್ಕಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬುದ್ದಿನ್ನಿ.ಎಸ್ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಗೆ ಶೇ.81.57 ಫಲಿತಾಂಶ

Spread the love

ನಮ್ಮ ಸಿಂಧನೂರು ಏಪ್ರಿಲ್ 23
ಮಸ್ಕಿ ತಾಲ್ಲೂಕಿನ ಬುದ್ದಿನ್ನಿ.ಎಸ್ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಗೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.81.57 ಫಲಿತಾಂಶ ದೊರಕಿದೆ. ಪರೀಕ್ಷೆಗೆ ಬರೆದ 38 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 2 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 8 ವಿದ್ಯಾರ್ಥಿಗಳೂ ದ್ವಿತೀಯ ಶ್ರೇಣಿ ಹಾಗೂ 13 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ. ಪಲ್ಲವಿ ತಂದೆ ದುರುಗಪ್ಪ 549 (87.84%), ರಿಯಾನ ತಂದೆ ಷರೀಫ್ 541 (86.56%) ಹಾಗೂ ಅಂಜಲಿ ತಂದೆ ಹನುಮಂತ 526 (84.16%) ವಿದ್ಯಾರ್ಥಿನಿಯರು ಶಾಲೆಗೆ ಮೊದಲ, ಎರಡನೇ ಹಾಗೂ ಮೂರನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯ ಕಳಕಪ್ಪ ಹಾದಿಮನಿ, ಶಿಕ್ಷಕರು, ಎಸ್ಡಿಎಂಸಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *