ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ಮಸ್ಕಿ ಮಾರ್ಚ್ 29
ತಾಲೂಕಿನ ಗುಡದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಸಮಕಲ್ ಗ್ರಾಮದ ಕುಡಿಯುವ ನೀರಿನ ಕೆರೆ ಭರ್ತಿಯಾಗಿದೆ. ಏಪ್ರಿಲ್ 10ರವರೆಗೆ ತುಂಗಭದ್ರಾ ಎಡದಂಡೆ ನಾಲೆಗೆ ನೀರು ಹರಿಬಿಡಲಾಗುತ್ತಿದ್ದು, ಬೇಸಿಗೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನೀರು ಸಂಗ್ರಹಿಸುವಂತೆ ಜಿಲ್ಲಾಡಳಿತ ಸೂಚಿಸಿದ ಬೆನ್ನಲ್ಲೇ ಕಳೆದ ವಾರದ ಹಿಂದೆಯೇ ಕೆರೆಯಲ್ಲಿ ನೀರು ಸಂಗ್ರಹಿಸಲಾಗಿದ್ದು, ಸಂಪೂರ್ಣ ಭರ್ತಿಯಾಗಿದೆ. ಈ ಕೆರೆಯಿಂದ ಗುಡದೂರು, ಹಸಮಕಲ್, ರಂಗಾಪುರ, ಪಾಂಡುರಂಗಕ್ಯಾಂಪ್, ಮುದ್ದಾಪುರ ಹಾಗೂ ಮಲ್ಲಿಕಾರ್ಜುನ ಕ್ಯಾಂಪ್‌ಗಳಿಗೆ ನೀರು ಸರಬರಾಜು ವ್ಯವಸ್ಥೆ ಇದ್ದು, ಜನ ಹಾಗೂ ಜಾನುವಾರುಗಳಿಗೆ ನೀರಿನ ಸೌಕರ್ಯ ಕಲ್ಪಿಸಲಾಗುತ್ತಿದೆ.