ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜೂನ್ 25
ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಗುರುವಾರ ಸಿಂಧನೂರು ನಗರಕ್ಕೆ ಆಗಮಿಸಲಿದ್ದಾರೆ ಎಂದು ತಾಲೂಕು ಜೆಡಿಎಸ್ ಪ್ರಕಟಣೆ ತಿಳಿಸಿದೆ. ರಾಜ್ಯದಾದ್ಯಂತ ಜೆಡಿಎಸ್‌ನಿಂದ ʼಜನರೊಂದಿಗೆ ಜನತಾದಳʼ ಪಕ್ಷದ ಪ್ರಚಾರಾಂದೋಲನ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಜೂನ್ 26 ಗುರುವಾರದಂದು ನಗರದ ಹೊರವಲಯದಲ್ಲಿರುವ ಯಲಿಮಂಚಾಲಿ ವಾಸುದೇವರಾವ್ ಕಲ್ಯಾಣ ಮಂಟಪದಲ್ಲಿ ಪಕ್ಷದ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್‌ನ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶಬಾಬು, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ದೇವದುರ್ಗ ಶಾಸಕಿ ಕರೆಮ್ಮ ನಾಯಕ, ಮಾನ್ವಿಯ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಸೇರಿದಂತೆ ಜೆಡಿಎಸ್‌ನ ರಾಜ್ಯಮಟ್ಟದ ಪದಾಧಿಕಾರಿಗಳು, ಮಾಜಿ ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.