ಸಿಂಧನೂರು: ಜವಳಗೇರಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇ.100ರಷ್ಟು ಫಲಿತಾಂಶ

Spread the love

ನಮ್ಮ ಸಿಂಧನೂರು, ಮೇ 11
ತಾಲೂಕಿನ ಜವಳಗೇರಾ ಮೊರಾರ್ಜಿ ದೇಸಾಯಿ ಶಾಲೆಗೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ದೊರಕಿದೆ. ಒಟ್ಟು 40 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 15ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ ಹೊಂದಿದ್ದಾರೆ. 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಎಸ್.ವೆಂಕಟೇಶ 598 (ಶೇ.95.68), ಲಕ್ಷ್ಮಿ.ಎನ್ 591 (ಶೇ.94.56), ರಮಾದೇವಿ 590 (ಶೇ.94.4) ಅಂಕಗಳನ್ನು ಪಡೆದು ವಸತಿ ಶಾಲೆಗೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ್ದು, ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಮೌಲಾಲಿ ದೊಡ್ಮನಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.


Spread the love

Leave a Reply

Your email address will not be published. Required fields are marked *