ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜನವರಿ 3
ತಾಲೂಕಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು ದಿನನಿತ್ಯ ಬಸ್ ಅಭಾವದಿಂದ ಸಮಸ್ಯೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ 15 ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದ್ದು, ದಿನಾಂಕ: 03-01-2026 ರಂದು ಹೊಸ ಬಸ್ಗಳು ರೋಡಿಗಿಳಿಯಲಿವೆ.
ರಾಜ್ಯದಲ್ಲಿಯೇ ಮೊದಲು
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿಯೇ ವಿಶೇಷ ಅನುದಾನವನ್ನು ಸರ್ಕಾರದಿಂದ ತರುವ ಮೂಲಕ ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸಿಂಧನೂರು ತಾಲೂಕಿನ ವಿದ್ಯಾರ್ಥಿಗಳಿಗೆ 15 ಬಸ್ಗಳ ವಿಶೇಷ ಸೌಲಭ್ಯವನ್ನು ಕಲ್ಪಿಸಲು ಮುಂದಾಗಲಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಅವರು ತಿಳಿಸಿದ್ದಾರೆ.

5 ಕೋಟಿ ರೂಪಾಯಿ ವೆಚ್ಚದಲ್ಲಿ ಹೈಟೆಕ್ ಬಸ್ ಸೌಲಭ್ಯ
ಸಿಂಧನೂರು ತಾಲೂಕಿನಲ್ಲಿ ಅಂದಾಜು 18 ಪದವಿ ಕಾಲೇಜುಗಳು, 32 ಪಿಯುಸಿ ಕಾಲೇಜ್ಗಳಿದ್ದು ಅಂದಾಜು 25,000 ಕಾಲೇಜು ವಿದ್ಯಾರ್ಥಿಗಳಿಗೆ ಆಯಾ ಗ್ರಾಮಗಳಿಂದ ನಗರಕ್ಕೆ ಬಂದು ಹೋಗಲು ಅನುಕೂಲವಾಗುವಂತೆ ವಿದ್ಯಾರ್ಥಿಗಳಿಗೆಂದೇ 5 ಕೋಟಿ ರೂಪಾಯಿ ವೆಚ್ಚದಲ್ಲಿ 15 ಬಸ್ಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಇಂದು ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.

